ಪ್ರಯಾಣಿಕರಿದ್ದ ಕುವೈತ್ ವಿಮಾನ ನಿಲ್ದಾಣದ ಮೇಲೂ ಇರಾನ್ ದಾಳಿ

Updated on: Feb 28, 2026 | 10:33 PM

ದುಬೈ, ಬಹ್ರೇನ್, ಅಬುಧಾಬಿಯಲ್ಲಿ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆಸಲಾಗಿದೆ. ದುಬೈನಲ್ಲಿ ಜನಪ್ರಿಯ ಕಟ್ಟಡಗಳ ಮೇಲೂ ದಾಳಿ ನಡೆಸಲಾಗಿದೆ. ಇದೀಗ ಕುವೈತ್​​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆಸಿರುವ ಇರಾನ್ ಅಮಾಯಕ ಜನರಿರುವ ಸ್ಥಳಗಳನ್ನು ಕೂಡ ಗುರಿಯಾಗಿಸಿಕೊಂಡಿದೆ. ಇರಾನ್‌ನಿಂದ ಹಾರಿಸಲಾದ ಡ್ರೋನ್ ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಪ್ಪಳಿಸಿದ್ದು, ಹಲವಾರು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಿಂದ ತುರ್ತು ಪ್ರೋಟೋಕಾಲ್‌ಗಳನ್ನು ಘೋಷಿಸಲಾಯಿತು.

ನವದೆಹಲಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್ ಸೇರಿ ತಮ್ಮ ದೇಶದ ಮೇಲೆ ದಾಳಿ ನಡೆಸಿದೆ ಎಂಬ ಕಾರಣಕ್ಕೆ ಇರಾನ್ (Iran War) ಕಂಡ-ಕಂಡ ದೇಶಗಳ ಮೇಲೆಲ್ಲ ವೈಮಾನಿಕ ದಾಳಿ ನಡೆಸುತ್ತಿದೆ. ದುಬೈ, ಬಹ್ರೇನ್, ಅಬುಧಾಬಿಯಲ್ಲಿ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆಸಲಾಗಿದೆ. ದುಬೈನಲ್ಲಿ ಜನಪ್ರಿಯ ಕಟ್ಟಡಗಳ ಮೇಲೂ ದಾಳಿ ನಡೆಸಲಾಗಿದೆ. ಇದೀಗ ಕುವೈತ್​​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆಸಿರುವ ಇರಾನ್ ಅಮಾಯಕ ಜನರಿರುವ ಸ್ಥಳಗಳನ್ನು ಕೂಡ ಗುರಿಯಾಗಿಸಿಕೊಂಡಿದೆ.

ಇರಾನ್‌ನಿಂದ ಹಾರಿಸಲಾದ ಡ್ರೋನ್ ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಪ್ಪಳಿಸಿದ್ದು, ಹಲವಾರು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಿಂದ ತುರ್ತು ಪ್ರೋಟೋಕಾಲ್‌ಗಳನ್ನು ಘೋಷಿಸಲಾಯಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More