ಕತಾರ್, ಬಹ್ರೇನ್, ಸೌದಿಯ ಯುಎಸ್ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಸೌದಿ ಅರೇಬಿಯಾದಲ್ಲಿ ಅಮೆರಿಕ 2,000ಕ್ಕೂ ಹೆಚ್ಚು ಸೈನಿಕರನ್ನು ಹೊಂದಿದೆ ಎಂದು ವರದಿಯಾಗಿದೆ. ಅವರಲ್ಲಿ ಕೆಲವರು ರಿಯಾದ್‌ನಿಂದ ಸುಮಾರು 60 ಕಿ.ಮೀ ದಕ್ಷಿಣದಲ್ಲಿರುವ ಪ್ರಿನ್ಸ್ ಸುಲ್ತಾನ್ ವಾಯುನೆಲೆಯಲ್ಲಿ ನೆಲೆಸಿದ್ದಾರೆ. ಯುಎಇ ಸುತ್ತಮುತ್ತ ಸ್ಫೋಟದ ಶಬ್ದಗಳು ಕೇಳಿಬರುತ್ತಿವೆ. ಇರಾನ್ ದಾಳಿಯ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ನವದೆಹಲಿ, ಫೆಬ್ರವರಿ 28: ಇಸ್ರೇಲ್ ಮತ್ತು ಅಮೆರಿಕ ಇರಾನ್ (Iran Attack) ಮೇಲೆ ಜಂಟಿಯಾಗಿ ದಾಳಿ ನಡೆಸಿವೆ. ಇದರಿಂದ ಮಧ್ಯಪ್ರಾಚ್ಯ ಹೊತ್ತಿ ಉರಿಯುತ್ತಿದೆ. ಇದಾದ ಕೆಲವೇ ಗಂಟೆಗಳ ನಂತರ ಯುಎಇಯ ಅಬುಧಾಬಿ, ಕತಾರ್, ಬಹ್ರೇನ್, ಕುವೈತ್ ಮೇಲೆ ದಾಳಿ ನಡೆಸಿದೆ. ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತಿರುವ ಇರಾನ್ ನಾನಾ ದೇಶಗಳಲ್ಲಿ ಇರುವ ಯುಎಸ್ ವಾಯುನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸತೊಡಗಿದೆ. ಇದರಿಂದಾಗಿ ಬೇರೆ ದೇಶಗಳಲ್ಲೂ ಭೀತಿ ಹೆಚ್ಚಾಗಿದೆ.
ಸೌದಿ ಅರೇಬಿಯಾದಲ್ಲಿ ಅಮೆರಿಕ 2,000ಕ್ಕೂ ಹೆಚ್ಚು ಸೈನಿಕರನ್ನು ಹೊಂದಿದೆ ಎಂದು ವರದಿಯಾಗಿದೆ. ಅವರಲ್ಲಿ ಕೆಲವರು ರಿಯಾದ್‌ನಿಂದ ಸುಮಾರು 60 ಕಿ.ಮೀ ದಕ್ಷಿಣದಲ್ಲಿರುವ ಪ್ರಿನ್ಸ್ ಸುಲ್ತಾನ್ ವಾಯುನೆಲೆಯಲ್ಲಿ ನೆಲೆಸಿದ್ದಾರೆ. ಯುಎಇ ಸುತ್ತಮುತ್ತ ಸ್ಫೋಟದ ಶಬ್ದಗಳು ಕೇಳಿಬರುತ್ತಿವೆ. ಇರಾನ್ ದಾಳಿಯ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ