ಬಹ್ರೇನ್​ನಲ್ಲಿರುವ ಅಮೆರಿಕದ ವಾಯುನೆಲೆ ಮೇಲೆ ಇರಾನ್ ದಾಳಿ

Updated on: Mar 04, 2026 | 12:52 PM

ಬಹ್ರೇನ್, ಕುವೈತ್, ಸೌದಿ ಅರೇಬಿಯಾ, ಯುಎಇಗಳಲ್ಲಿ ಯುಎಸ್ ಮಿಲಿಟರಿ ಸಂವಹನ ಮೂಲಸೌಕರ್ಯದ ಮೇಲೆ ದಾಳಿ ಇರಾನ್ ಮಾಡಿದೆ. ಯುಎಸ್-ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದ ನಂತರ ಈ ದಾಳಿಗಳು ನಡೆದಿವೆ. ಇದು ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವಿಗೆ ಕಾರಣವಾಯಿತು. ಇಂದು ಮತ್ತೆ ಇರಾನ್ ಬಹ್ರೇನ್​ನ ಯುಎಸ್ ವಾಯುನೆಲೆ ಮೇಲೆ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯ ದೃಶ್ಯವನ್ನು ಬಹ್ರೇನ್ ನಿವಾಸಿಗಳು ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ.

ಬಹ್ರೇನ್, ಮಾರ್ಚ್ 4: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರವಾಗಿ ಇರಾನ್ ಕೂಡ ತನ್ನ ದಾಳಿಯನ್ನು ಮುಂದುವರೆಸಿದೆ. ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳನ್ನು ಇರಾನ್ (Iran Attack) ಗುರಿಯಾಗಿಸಿಕೊಂಡಿದೆ. ಈಗಾಗಲೇ ಬಹ್ರೇನ್, ಕುವೈತ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಮಿಲಿಟರಿ ಸೌಲಭ್ಯಗಳ ಮೇಲೆ ದಾಳಿ ನಡೆದಿವೆ. ಇಂದು ಮತ್ತೆ ಇರಾನ್ ಬಹ್ರೇನ್​ನ ಯುಎಸ್ ವಾಯುನೆಲೆ ಮೇಲೆ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯ ದೃಶ್ಯವನ್ನು ಬಹ್ರೇನ್ ನಿವಾಸಿಗಳು ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More