ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ; ಟೆಹ್ರಾನ್​ ತುಂಬ ದಟ್ಟ ಹೊಗೆ

Updated on: Mar 03, 2026 | 10:06 PM

ಇರಾನ್‌ನ ಟೆಹ್ರಾನ್‌ನ ಮೆಹ್ರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಬಾಂಬ್ ದಾಳಿ ನಡೆಸಿವೆ. ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ಇರಾನಿನ ಮಾಧ್ಯಮಗಳು ತಿಳಿಸಿವೆ. ಇಸ್ರೇಲ್ ಪೈಲಟ್‌ಗಳು ಇರಾನ್ ಮತ್ತು ಲೆಬನಾನ್‌ನ ಮೇಲೆ ದಾಳಿ ನಡೆಸುತ್ತಲೇ ಇದ್ದಾರೆ. ನಮ್ಮ ರಾಷ್ಟ್ರವು ಹೆಚ್ಚಿನ ಬಲದಿಂದ ಪ್ರತಿಕ್ರಿಯಿಸುತ್ತದೆ. ಯುದ್ಧದಿಂದ ಹಿಂದೆ ಸರಿಯುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಟೆಹ್ರಾನ್, ಮಾರ್ಚ್ 3: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕದ ಪಡೆಗಳ ದಾಳಿ ಮುಂದುವರೆದಿದೆ. ಇಂದು ಟೆಹ್ರಾನ್‌ನಲ್ಲಿ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಇರಾನ್‌ನ (Iran) ಮೆಹ್ರಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದ್ದರಿಂದ ಸುತ್ತಲೂ ಹೊಗೆಯಿಂದ ಆವೃತವಾಗಿದೆ.

ಅಮೆರಿಕ ಮತ್ತು ಇಸ್ರೇಲ್​ನಿಂದ ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ಇರಾನಿನ ಮಾಧ್ಯಮಗಳು ತಿಳಿಸಿವೆ. ಈ ವಿಮಾನ ನಿಲ್ದಾಣ ಛಿದ್ರವಾಗಿದ್ದು, ಕಪ್ಪು ಹೊಗೆಯೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಇಸ್ರೇಲ್ ಪೈಲಟ್‌ಗಳು ಇರಾನ್ ಮತ್ತು ಲೆಬನಾನ್‌ನ ಮೇಲೆ ದಾಳಿ ನಡೆಸುತ್ತಲೇ ಇದ್ದಾರೆ. ನಮ್ಮ ರಾಷ್ಟ್ರವು ಹೆಚ್ಚಿನ ಬಲದಿಂದ ಪ್ರತಿಕ್ರಿಯಿಸುತ್ತದೆ. ಯುದ್ಧದಿಂದ ಹಿಂದೆ ಸರಿಯುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More