VIDEO: ಮೊದಲ ಪಂದ್ಯದ ಕೊನೆಯ ಎಸೆತದಲ್ಲಿ ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ಬರೆದ ಜೇನ್
Jane Maguire: ವಿಶೇಷ ಎಂದರೆ ಇದು ಜೇನ್ ಮ್ಯಾಗೈರ್ ಅವರ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಪಂದ್ಯ. ಮೊದಲ ಪಂದ್ಯದಲ್ಲಿ ಇನಿಂಗ್ಸ್ನ ಕೊನೆಯ ಎಸೆತ ವೇಳೆ ಕಣಕ್ಕಿಳಿದ ಜೇನ್ ತಾನೆದುರಿಸಿದ ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸಿದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಚೊಚ್ಚಲ ಪಂದ್ಯದ ಕೊನೆಯ ಎಸೆತದಲ್ಲಿ ಸಿಕ್ಸ್ ಸಿಡಿಸಿ ಪಂದ್ಯ ಗೆಲ್ಲಿಸಿಕೊಟ್ಟ ಮೊದಲ ಪ್ಲೇಯರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.
ಟಿ20 ಕ್ರಿಕೆಟ್ನಲ್ಲಿ ಐರ್ಲೆಂಡ್ ಆಟಗಾರ್ತಿ ಜೇನ್ ಮ್ಯಾಗೈರ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಚೊಚ್ಚಲ ಪಂದ್ಯದಲ್ಲಿ ಎದುರಿಸಿದ ಮೊದಲ ಎಸೆತದಲ್ಲಿ ಸಿಕ್ಸ್ ಸಿಡಿಸುವ ಮೂಲಕ. ಬೆಲ್ಫಾಸ್ಟ್ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ್ ಮಹಿಳಾ ತಂಡ ಹಾಗೂ ಐರ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 168 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ ತಂಡವು 19.4 ಓವರ್ಗಳಲ್ಲಿ 165 ರನ್ ಕಲೆಹಾಕಿದ್ದರು. ಅಲ್ಲದೆ ಕೊನೆಯ 2 ಎಸೆತಗಳಲ್ಲಿ ಗೆಲ್ಲಲು 4 ರನ್ಗಳಿಸಬೇಕಿತ್ತು. ಈ ಹಂತದಲ್ಲಿ ಅವಾ ಕನ್ನಿಂಗ್ (4) ಸ್ಟಂಪ್ ಔಟಾದರು.
ಅದರಂತೆ 20ನೇ ಓವರ್ನ ಅಂತಿಮ ಎಸೆತದಲ್ಲಿ ಐರ್ಲೆಂಡ್ ತಂಡಕ್ಕೆ ಗೆಲ್ಲಲು 4 ರನ್ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಕ್ರೀಸ್ಗೆ ಆಗಮಿಸಿದ ಜೇನ್ ಮ್ಯಾಗೈರ್ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಐರ್ಲೆಂಡ್ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.
ಜೇನ್ ವಿಶ್ವ ದಾಖಲೆ:
ವಿಶೇಷ ಎಂದರೆ ಇದು ಜೇನ್ ಮ್ಯಾಗೈರ್ ಅವರ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಪಂದ್ಯ. ಮೊದಲ ಪಂದ್ಯದಲ್ಲಿ ಇನಿಂಗ್ಸ್ನ ಕೊನೆಯ ಎಸೆತ ವೇಳೆ ಕಣಕ್ಕಿಳಿದ ಜೇನ್ ತಾನೆದುರಿಸಿದ ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸಿದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಚೊಚ್ಚಲ ಪಂದ್ಯದ ಕೊನೆಯ ಎಸೆತದಲ್ಲಿ ಸಿಕ್ಸ್ ಸಿಡಿಸಿ ಪಂದ್ಯ ಗೆಲ್ಲಿಸಿಕೊಟ್ಟ ಮೊದಲ ಪ್ಲೇಯರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

