VIDEO: ಮೊದಲ ಪಂದ್ಯದ ಕೊನೆಯ ಎಸೆತದಲ್ಲಿ ಸಿಕ್ಸ್​ ಸಿಡಿಸಿ ವಿಶ್ವ ದಾಖಲೆ ಬರೆದ ಜೇನ್

Updated on: Aug 09, 2025 | 8:56 AM

Jane Maguire: ವಿಶೇಷ ಎಂದರೆ ಇದು ಜೇನ್ ಮ್ಯಾಗೈರ್ ಅವರ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಪಂದ್ಯ. ಮೊದಲ ಪಂದ್ಯದಲ್ಲಿ ಇನಿಂಗ್ಸ್​ನ ಕೊನೆಯ ಎಸೆತ ವೇಳೆ ಕಣಕ್ಕಿಳಿದ ಜೇನ್ ತಾನೆದುರಿಸಿದ ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸಿದರು. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಚೊಚ್ಚಲ ಪಂದ್ಯದ ಕೊನೆಯ ಎಸೆತದಲ್ಲಿ ಸಿಕ್ಸ್ ಸಿಡಿಸಿ ಪಂದ್ಯ ಗೆಲ್ಲಿಸಿಕೊಟ್ಟ ಮೊದಲ ಪ್ಲೇಯರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಟಿ20 ಕ್ರಿಕೆಟ್​ನಲ್ಲಿ ಐರ್ಲೆಂಡ್ ಆಟಗಾರ್ತಿ ಜೇನ್ ಮ್ಯಾಗೈರ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಚೊಚ್ಚಲ ಪಂದ್ಯದಲ್ಲಿ ಎದುರಿಸಿದ ಮೊದಲ ಎಸೆತದಲ್ಲಿ ಸಿಕ್ಸ್ ಸಿಡಿಸುವ ಮೂಲಕ. ಬೆಲ್​ಫಾಸ್ಟ್​ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ್ ಮಹಿಳಾ ತಂಡ ಹಾಗೂ ಐರ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 168 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ ತಂಡವು 19.4 ಓವರ್​ಗಳಲ್ಲಿ 165 ರನ್​ ಕಲೆಹಾಕಿದ್ದರು. ಅಲ್ಲದೆ ಕೊನೆಯ 2 ಎಸೆತಗಳಲ್ಲಿ ಗೆಲ್ಲಲು 4 ರನ್​ಗಳಿಸಬೇಕಿತ್ತು. ಈ ಹಂತದಲ್ಲಿ ಅವಾ ಕನ್ನಿಂಗ್​ (4) ಸ್ಟಂಪ್ ಔಟಾದರು.

ಅದರಂತೆ 20ನೇ ಓವರ್​ನ ಅಂತಿಮ ಎಸೆತದಲ್ಲಿ ಐರ್ಲೆಂಡ್ ತಂಡಕ್ಕೆ ಗೆಲ್ಲಲು 4 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಕ್ರೀಸ್​ಗೆ ಆಗಮಿಸಿದ ಜೇನ್ ಮ್ಯಾಗೈರ್ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಐರ್ಲೆಂಡ್ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

ಜೇನ್ ವಿಶ್ವ ದಾಖಲೆ:

ವಿಶೇಷ ಎಂದರೆ ಇದು ಜೇನ್ ಮ್ಯಾಗೈರ್ ಅವರ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಪಂದ್ಯ. ಮೊದಲ ಪಂದ್ಯದಲ್ಲಿ ಇನಿಂಗ್ಸ್​ನ ಕೊನೆಯ ಎಸೆತ ವೇಳೆ ಕಣಕ್ಕಿಳಿದ ಜೇನ್ ತಾನೆದುರಿಸಿದ ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸಿದರು. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಚೊಚ್ಚಲ ಪಂದ್ಯದ ಕೊನೆಯ ಎಸೆತದಲ್ಲಿ ಸಿಕ್ಸ್ ಸಿಡಿಸಿ ಪಂದ್ಯ ಗೆಲ್ಲಿಸಿಕೊಟ್ಟ ಮೊದಲ ಪ್ಲೇಯರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.