ಹಾರ್ಮುಜ್ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ, ಭಾರತದ ನಾಲ್ವರು ನಾವಿಕರು ಬಲಿ:, ಭಾರತ ತೀವ್ರ ಆಕ್ರೋಶ
ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಈ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಕಳವಳ ವ್ಯಕ್ತಪಡಿಸಿದ್ದಾರೆ.
ಹಾರ್ಮುಜ್ , ಏಪ್ರಿಲ್ 20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಈ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಕಳವಳ ವ್ಯಕ್ತಪಡಿಸಿದ್ದಾರೆ.
ಈ ದಾಳಿ ಭಾರತದ ‘ಜಾಗರ್ನವ್’ ಮತ್ತು ‘ಸನ್ಮಾರ್ ಹೆರಾಲ್ಡ್’ ಹಡಗುಗಳ ಮೇಲೆ ನಡೆದಿತ್ತು. ಅಮೆರಿಕಾ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾಗಿ ಹಾರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳಿಗೆ ತೆರೆಯಲಾಗುವುದು ಎಂದು ಇರಾನ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿದೆ. ಇರಾನ್‌ನ ವಿದೇಶಾಂಗ ಸಚಿವರೇ ಈ ಬಗ್ಗೆ ಹೇಳಿಕೆ ನೀಡಿದ್ದರೂ, ಭಾರತೀಯ ಧ್ವಜವಿದ್ದ ಹಡಗುಗಳ ಮೇಲೆ ದಾಳಿ ನಡೆದಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಭಾರತ ಸರ್ಕಾರ ಇರಾನ್ ರಾಯಭಾರಿಯನ್ನು ಕರೆಸಿ ಪ್ರತಿಭಟನೆ ದಾಖಲಿಸಿದೆ ಹಾಗೂ ದಾಳಿಯ ಉದ್ದೇಶದ ಬಗ್ಗೆ ಉತ್ತರಿಸುವಂತೆ ಆಗ್ರಹಿಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು

