AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಡಿ’ ಸಿನಿಮಾದಲ್ಲಿ ಸುದೀಪ್ ನಟಿಸ್ತಾರಾ? ನೇರ ಪ್ರಶ್ನೆಗೆ ಪ್ರೇಮ್ ಕೊಟ್ಟ ಉತ್ತರ ಏನು?‘ಕೆಡಿ’ ಸಿನಿಮಾದಲ್ಲಿ ಸುದೀಪ್ ನಟಿಸ್ತಾರಾ? ನೇರ ಪ್ರಶ್ನೆಗೆ ಪ್ರೇಮ್ ಕೊಟ್ಟ ಉತ್ತರ ಏನು?

‘ಕೆಡಿ’ ಸಿನಿಮಾದಲ್ಲಿ ಸುದೀಪ್ ನಟಿಸ್ತಾರಾ? ನೇರ ಪ್ರಶ್ನೆಗೆ ಪ್ರೇಮ್ ಕೊಟ್ಟ ಉತ್ತರ ಏನು?

ಮದನ್​ ಕುಮಾರ್​
|

Updated on: Jul 13, 2025 | 12:27 PM

Share

‘ಕೆಡಿ: ದಿ ಡೆವಿಲ್’ ಚಿತ್ರದ ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಜೋಗಿ ಪ್ರೇಮ್ ಅವರಿಗೆ ಈ ಪ್ರಶ್ನೆ ಎದುರಾಯಿತು. ನಟ ಕಿಚ್ಚ ಸುದೀಪ್ ಅವರು ‘ಕೆಡಿ’ ಸಿನಿಮಾದಲ್ಲಿ ನಟಿಸುತ್ತಾರಾ ಎಂದು ಕೇಳಲಾಯಿತು. ಧ್ರುವ ಸರ್ಜಾ, ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ, ಸಂಜಯ್ ದತ್ ಮುಂತಾದ ಕಲಾವಿದರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ.

ಧ್ರುವ ಸರ್ಜಾ ನಟನೆಯ ‘ಕೆಡಿ: ದಿ ಡೆವಿಲ್’ (KD The Devil) ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಪ್ರೇಮ್ ಅವರಿಗೆ ಈ ಪ್ರಶ್ನೆ ಎದುರಾಯಿತು. ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ, ಸಂಜಯ್ ದತ್ ಮುಂತಾದ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ನಟ ಕಿಚ್ಚ ಸುದೀಪ್ (Kichcha Sudeep) ಕೂಡ ‘ಕೆಡಿ’ ಸಿನಿಮಾದಲ್ಲಿ ನಟಿಸುತ್ತಾರಾ ಎಂಬ ಅನುಮಾನ ಇದೆ. ‘ಸುದೀಪ್ ನಟಿಸುವುದು ನಿಜವೇ ಹೌದಾದರೆ ಅವರನ್ನೇ ಕರೆದುಕೊಂಡು ಬಂದು ಸುದ್ದಿಗೋಷ್ಠಿಯಲ್ಲಿ ಕೂರಿಸುತ್ತೇನೆ’ ಎಂದು ಪ್ರೇಮ್ (Jogi Prem) ಹೇಳಿದರು. ಆದರೆ ಹೌದು ಅಥವಾ ಇಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More