ನಿಜಕ್ಕೂ ದರ್ಶನ್ ತಲೆಯನ್ನು ಕ್ಲೀನ್ ಶೇವ್ ಮಾಡಲಾಗಿದೆಯಾ? ಅಸಲಿ ವಿಚಾರ ರಿವೀಲ್ ಮಾಡಿದ ಬಾಲ್ಯದ ಗೆಳೆಯ

Updated on: Jul 18, 2024 | 8:14 AM

ರೇಣುಕಾ ಸ್ವಾಮಿ ಅವರ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಈ ಕೊಲೆ ಕೇಸ್​ನಲ್ಲಿ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ದರ್ಶನ್ ಬಗ್ಗೆ ಹಲವು ವಿಚಾರಗಳು ಚರ್ಚೆ ಆಗುತ್ತಿವೆ. ಈ ಬಗ್ಗೆ ಅವರ ಬಾಲ್ಯದ ಗೆಳೆಯ ಶಿವಕುಮಾರ್ ಮಾತನಾಡಿದ್ದಾರೆ.

ನಟ ದರ್ಶನ್ ಅವರು ಜೈಲಿನಲ್ಲಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ದರ್ಶನ್ ಬಗ್ಗೆ ಹಲವು ವಿಚಾರಗಳು ಚರ್ಚೆ ಆಗುತ್ತಿವೆ. ಈ ಬಗ್ಗೆ ಅವರ ಬಾಲ್ಯದ ಗೆಳೆಯ ಶಿವಕುಮಾರ್ ಮಾತನಾಡಿದ್ದಾರೆ. ‘ದರ್ಶನ್ ಸಣ್ಣ ಆಗಿದ್ದಾರೆ. ತೂಕ ಕಳೆದುಕೊಂಡಿದ್ದಾರೆ. ಊಟ ಅವರಿಗೆ ಸೇರುತ್ತಿಲ್ಲ. ಇದಕ್ಕಾಗಿ ಸಣ್ಣ ಆಗಿದ್ದಾರೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ದರ್ಶನ್​ ತಲೆಯನ್ನು ಕ್ಲೀನ್ ಶೇವ್ ಮಾಡಲಾಗಿದೆ ಎನ್ನುವ ಸುದ್ದಿ ಹರಿದಾಡಿತ್ತು. ಇದನ್ನು ಅವರು ಅಲ್ಲಗಳೆದಿದ್ದಾರೆ. ‘ದರ್ಶನ್ ಕೂದಲು ಶಾರ್ಟ್ ಮಾಡಿಸಿದ್ದಾರೆ. ಅಲ್ಲಿ ಕೂದಲನ್ನು ನಿರ್ವಹಿಸೋದು ತುಂಬಾನೇ ಕಷ್ಟ’ ಎಂದಿದ್ದಾರೆ ಅವರು. ದರ್ಶನ್ ಅವರು ‘ಡೆವಿಲ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ನಿರ್ಮಾಪಕರು ಇಂದಿಗೂ ಸ್ಟ್ರಾಂಗ್ ಆಗಿಯೇ ಇದ್ದಾರಂತೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More