AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ ಪ್ರಶ್ನೆ

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ ಪ್ರಶ್ನೆ

ಅನಿಲ್​ ಕಲ್ಕೆರೆ
| Edited By: |

Updated on:Oct 05, 2024 | 6:40 PM

Share

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳಿಂದ ಒತ್ತಡ ಹಾಕಲಾಗುತ್ತಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ಇದೆಲ್ಲಾ ನೋಡಿ ಸೈಟ್​​ಗಳೇ ಬೇಡ ಅಂತಾ ವಾಪಸ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್​ 05: ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆಗೆ ವಿಪಕ್ಷಗಳ ಒತ್ತಡ ವಿಚಾರವಾಗಿ ಮಾತನಾಡಿದ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಇದೆಲ್ಲಾ ನೋಡಿ ಸೈಟ್​​ಗಳೇ ಬೇಡ ಅಂತಾ ವಾಪಸ್ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು. ಬ್ಯೂಟಿ ಕ್ವೀನ್ ಮದುವೆ ಆಗೋಕೆ ಎಲ್ಲರಿಗೂ ಬಯಕೆ ಇರುತ್ತದೆ. ಆದರೆ ಈಗ ಬ್ಯೂಟಿ ಕ್ವೀನ್​​ನ ಮದುವೆ ಆಗಿರೋದು ಸಿದ್ದರಾಮಯ್ಯ. ವಿಶ್ವ ಸುಂದರಿ ಆಗುವುದಕ್ಕೆ ಸಾಧ್ಯವಿಲ್ಲ. ಡಿಕೆ ಶಿವಕುಮಾರ್​​, ಡಾ.ಜಿ.ಪರಮೇಶ್ವರ್ ಪ್ರಯತ್ನ ಮಾಡುವುದರಲ್ಲಿ ತಪ್ಪಿಲ್ಲ. ಅವರು ಹಣದ ಆಸೆಗೆ ಬೀಳುವವರಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Oct 05, 2024 06:39 PM

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More