ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳಿಂದ ಒತ್ತಡ ಹಾಕಲಾಗುತ್ತಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ಇದೆಲ್ಲಾ ನೋಡಿ ಸೈಟ್ಗಳೇ ಬೇಡ ಅಂತಾ ವಾಪಸ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು, ಅಕ್ಟೋಬರ್ 05: ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆಗೆ ವಿಪಕ್ಷಗಳ ಒತ್ತಡ ವಿಚಾರವಾಗಿ ಮಾತನಾಡಿದ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಇದೆಲ್ಲಾ ನೋಡಿ ಸೈಟ್ಗಳೇ ಬೇಡ ಅಂತಾ ವಾಪಸ್ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು. ಬ್ಯೂಟಿ ಕ್ವೀನ್ ಮದುವೆ ಆಗೋಕೆ ಎಲ್ಲರಿಗೂ ಬಯಕೆ ಇರುತ್ತದೆ. ಆದರೆ ಈಗ ಬ್ಯೂಟಿ ಕ್ವೀನ್ನ ಮದುವೆ ಆಗಿರೋದು ಸಿದ್ದರಾಮಯ್ಯ. ವಿಶ್ವ ಸುಂದರಿ ಆಗುವುದಕ್ಕೆ ಸಾಧ್ಯವಿಲ್ಲ. ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್ ಪ್ರಯತ್ನ ಮಾಡುವುದರಲ್ಲಿ ತಪ್ಪಿಲ್ಲ. ಅವರು ಹಣದ ಆಸೆಗೆ ಬೀಳುವವರಲ್ಲ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Oct 05, 2024 06:39 PM