ಕೈದಿಗಳಿಗೆ ರಾಜಾತಿಥ್ಯ ವಿಡಿಯೋ ವೈರಲ್​ ಹಿಂದೆ ಷಡ್ಯಂತ್ರ?: ಅಸಲಿ ಟಾರ್ಗೆಟ್​ ಯಾರು?

Updated By: Digi Tech Desk

Updated on: Nov 10, 2025 | 11:56 AM

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಐಷಾರಾಮಿ ಜೀವನದ ವಿಡಿಯೋಗಳು ಒಂದೊಂದೇ ವೈರಲ್​ ಅಗುತ್ತಿವೆ. ಅಧಿಕಾರಿಗಳ ವರ್ಗಾವಣೆ ಅಥವಾ ಹಣಕಾಸಿನ ಲಾಭಕ್ಕಾಗಿ ಈ ವಿಡಿಯೋಗಳು ಹೊರಬಂದಿರಬಹುದೆಂಬ ಸಂಶಯ ವ್ಯಕ್ತವಾಗಿದ್ದು, ಎಡಿಜಿಪಿ ದಯಾನಂದ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮತ್ತೊಂದೆಡೆ ಇದೇ ವಿಚಾರವಾಗಿ ಗೃಹಸಚಿವರೂ ಸಭೆ ನಡೆಸಿದ್ದಾರೆ.

ಬೆಂಗಳೂರು, ನವೆಂಬರ್​ 10: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಮೊಬೈಲ್​ ಮತ್ತು ಟಿವಿಗಳ ಬಳಕೆಯ ವಿಡಿಯೋಗಳು ವೈರಲ್​ ಆಗಿವೆ. ಜೈಲಿನಲ್ಲಿ ಭಯೋತ್ಪಾದಕರು ಮತ್ತು ಅತ್ಯಾಚಾರಿಗಳ ಕೈಯಲ್ಲಿ ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ. ಜೈಲಿನಲ್ಲೇ ವಿಚಾರಣಾಧೀನ ಕೈದಿ ಜನ್ಮದಿನ ಆಚರಿಸಿಕೊಂಡ ದೃಶ್ಯಗಳೂ ಈ ಹಿಂದೆ ವೈರಲ್​ ಆಗಿದ್ದವು. ಈ ಅಕ್ರಮಗಳ ಹಿಂದೆ ಅಧಿಕಾರಿಗಳ ಕೈವಾಡವಿದ್ದು, ಹುದ್ದೆಗಳಿಗಾಗಿ ಅಥವಾ ಹಣಕಾಸಿನ ಲಾಭಕ್ಕಾಗಿ ವ್ಯವಸ್ಥಿತ ಪಿತೂರಿ ನಡೆಯುತ್ತಿದ್ಯಾ ಎಂಬ ಅನುಮಾನ ವ್ಯಕ್ತವಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಉನ್ನತ ಹುದ್ದೆಗಳಿಗೆ ಭಾರಿ ಬೇಡಿಕೆ ಇದ್ದು, ಇಲ್​ಲಿ ವಿಐಪಿ ಖೈದಿಗಳಿಗೆ ಸೌಲಭ್ಯ ನೀಡಿಯೇ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆಸಲಾಗುತ್ತೆ ಎಂಬ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಹಿರಿಯ ಅಧಿಕಾರಿಗಳನ್ನ ಟಾರ್ಗೆಟ್​ ಮಾಡುವ ಉದ್ದೇಶದಿಂದ ಸಿಬ್ಬಂದಿಯೇ ಈ ಕೆಲಸ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಉದ್ಭವಿಸಿದೆ. ವಿಚಾರವನ್ನು ಗೃಹ ಸಚಿವ ಜಿ. ಪರಮೇಶ್ವರ್​ ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಕಾರಾಗೃಹ ಎಡಿಜಿಪಿ ಬಿ.ದಯಾನಂದ ವಿದೇಶದಲ್ಲಿರುವ ಹಿನ್ನೆಲೆ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 10, 2025 11:28 AM