Ishan Kishan: 6,0,6… ಧೋನಿಯಂತೆ ಸಿಕ್ಸರ್ ಬಾರಿಸಿ ತಂಡಕ್ಕೆ ಗೆಲುವು ತಂದ ಇಶಾನ್ ಕಿಶನ್; ವಿಡಿಯೋ ನೋಡಿ
Ishan Kishan: ತಮಿಳುನಾಡಿನಲ್ಲಿ ನಡೆಯುತ್ತಿರುವ ಬುಚ್ಚಿ ಬಾಬು ಟ್ರೋಫಿಯಲ್ಲಿ ಜಾರ್ಖಂಡ್ ತಂಡದ ನಾಯಕರಾಗಿದ್ದ ಇಶಾನ್ ಕಿಶನ್ ಮಧ್ಯಪ್ರದೇಶ ವಿರುದ್ಧ ಎರಡು ವಿಕೆಟ್ಗಳಿಂದ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ಇಶಾನ್ ಕಿಶನ್, ಎರಡನೇ ಇನ್ನಿಂಗ್ಸ್‌ನಲ್ಲಿ 41 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು.
ತಾನು ಮಾಡಿಕೊಂಡ ತಪ್ಪಿನಿಂದ ಟೀಂ ಇಂಡಿಯಾದಿಂದ ಹೊರಗುಳಿಯಬೇಕಾದ ದೊಡ್ಡ ಶಿಕ್ಷೆಗೆ ಗುರಿಯಾಗಿರುವ ತಂಡದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್, ಇದೀಗ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಮತ್ತೊಮ್ಮೆ ರಾಷ್ಟ್ರೀಯ ತಂಡವನ್ನು ಸೇರಿಕೊಳ್ಳುವ ಸನಿಹದಲ್ಲಿದ್ದಾರೆ. ಪ್ರಸ್ತುತ ತಮಿಳುನಾಡಿನಲ್ಲಿ ನಡೆಯುತ್ತಿರುವ ಬುಚ್ಚಿ ಬಾಬು ಟ್ರೋಫಿಯಲ್ಲಿ ಜಾರ್ಖಂಡ್ ತಂಡದ ನಾಯಕರಾಗಿದ್ದ ಇಶಾನ್ ಕಿಶನ್ ಮಧ್ಯಪ್ರದೇಶ ವಿರುದ್ಧ ಎರಡು ವಿಕೆಟ್ಗಳಿಂದ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ಇಶಾನ್ ಕಿಶನ್, ಎರಡನೇ ಇನ್ನಿಂಗ್ಸ್‌ನಲ್ಲಿ 41 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಜಾರ್ಖಂಡ್ ಗೆಲುವಿಗೆ 138 ರನ್ ಗಳಿಸಬೇಕಿತ್ತು. ಕೊನೆಯಲ್ಲಿ ಇಶಾನ್ ಕಿಶನ್ ಎರಡು ಸಿಕ್ಸರ್ ಬಾರಿಸುವ ಮೂಲಕ ತಂಡಕ್ಕೆ ಜಯ ತಂದುಕೊಟ್ಟರು.
ಇದರೊಂದಿಗೆ ಇಶಾನ್ ಕಿಶನ್, ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಇರಾದೆಯಲ್ಲಿದ್ದು, ದುಲೀಪ್ ಟ್ರೋಫಿಯಲ್ಲೂ ಕಿಶನ್ ಇದೇ ಪ್ರದರ್ಶನ ಮುಂದುವರೆಸಿದರೆ, ಅವರಿಗೆ ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಸ್ಥಾನ ಸಿಗುವುದು ಖಚಿತ. ಈ ಪಂದ್ಯದಲ್ಲಿ ಕಿಶನ್ ತನ್ನ ಪ್ರದರ್ಶನದ ಮೂಲಕ ಎಲ್ಲಾ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ವಿಕೆಟ್ ಕೀಪಿಂಗ್‌ನಲ್ಲಿ ಮೂರು ಅದ್ಭುತ ಕ್ಯಾಚ್‌ಗಳನ್ನು ಪಡೆದಿದ್ದ ಕಿಶನ್, ಇದಲ್ಲದೇ ಶತಕದ ಇನಿಂಗ್ಸ್ ಆಡಿದರು. ಎರಡನೇ ಇನ್ನಿಂಗ್ಸ್‌ನಲ್ಲೂ ಜಾರ್ಖಂಡ್ ತಂಡ ಸಂಕಷ್ಟದಲ್ಲಿದ್ದಾಗ 41 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು.