ಕೆಲವು ವಿಚಾರಗಳನ್ನ ವಿಚಾರಿಸೋದು ನನ್ನ ಧರ್ಮ ಅಲ್ವಾ? ಸಿದ್ದರಾಮಯ್ಯರ ಭೇಟಿ ರಹಸ್ಯ ಬಿಚ್ಚಿಟ್ಟ ಸಿಎಂ

Edited By:

Updated on: Oct 17, 2026 | 7:16 PM

ಮುಖ್ಯಾಂಶಗಳು

  • ಮೈಸೂರಿನಲ್ಲಿ ನಿನ್ನೆ ಸಿದ್ದರಾಮಯ್ಯ ಭೇಟಿ ಮಾಡಿದ್ದ ಡಿಕೆ ಶಿವಕುಮಾರ್​​
  • ನಮ್ಮ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದೇನೆ ಎಂದ ಸಿಎಂ
  • ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ

ಕರ್ನಾಟಕ ಸ್ಟಿಂಗ್ ಆಪರೇಷನ್ ವಿವಾದ ತೀವ್ರ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ. ಹೆಚ್.ಡಿ. ಕುಮಾರಸ್ವಾಮಿ ಡಿಜಿಪಿ ಕಚೇರಿ ಚಲೋ ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದು, ಸೈಬರ್ ಕ್ರೈಂ ಪೊಲೀಸರು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 17: ಸ್ಟಿಂಗ್ ಆಪರೇಷನ್​ ಪ್ರಕರಣ ಸದ್ಯ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಸ್ಟಿಂಗ್ ಸಂಚಲನದ ನಡುವೆ ಸಿಎಂ ಡಿಕೆ ಶಿವಕುಮಾರ್​​ ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯರನ್ನ ಮೈಸೂರಿನ ಕುವೆಂಪು ನಗರದಲ್ಲಿರುವ ಅವರ ನಿವಾಸಕ್ಕೆ ಹೋಗಿ ಭೇಟಿ ಮಾಡಿದ್ದಾರೆ. ಇದು ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಸದ್ಯ ಈ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್, ‘ನಿನ್ನೆ ನಮ್ಮ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದೇನೆ. ಕೆಲವು ವಿಚಾರಗಳನ್ನು ವಿಚಾರಿಸೋದು ನನ್ನ ಧರ್ಮ ಅಲ್ವಾ, ಅದಕ್ಕೆ ಮೈಸೂರಿಗೆ ಹೋಗಿ ಭೇಟಿ ಮಾಡಿಕೊಂಡು ಬಂದಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More