AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು

ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು

ಗಂಗಾಧರ​ ಬ. ಸಾಬೋಜಿ
|

Updated on: Feb 28, 2026 | 5:03 PM

Share

ಇಸ್ರೇಲ್ ಮೇಲೆ ಇರಾನ್ ಅನಿರೀಕ್ಷಿತ ಪ್ರತಿದಾಳಿ ನಡೆಸಿದ್ದು, ಟೆಲ್ ಅವಿವ್ ಸೇರಿದಂತೆ ಎಂಟು ದೇಶಗಳಲ್ಲಿ ಕ್ಷಿಪಣಿ ದಾಳಿ ಮಾಡಿದೆ. ಅಮೆರಿಕದ ಸೇನಾ ನೆಲೆಗಳೂ ಗುರಿಯಾಗಿವೆ. ಯುದ್ಧದ ಕಾರ್ಮೋಡ ಆವರಿಸಿದ್ದು, ವಿಮಾನ ಸೇವೆಗಳು ಸ್ಥಗಿತಗೊಂಡಿವೆ. ಇಸ್ರೇಲ್‌ನಲ್ಲಿ ಕನ್ನಡಿಗರ ರಕ್ಷಣಾ ಕ್ರಮಗಳ ಬಗ್ಗೆಯೂ ಮಾಹಿತಿ ದೊರೆತಿದೆ.

ಬೆಂಗಳೂರು, ಫೆಬ್ರವರಿ 28: ಇಸ್ರೇಲ್ ಮತ್ತು ಇರಾನ್ ನಡುವೆ ಪ್ರಾದೇಶಿಕ ಉದ್ವಿಗ್ನತೆ ಉಲ್ಬಣಗೊಂಡಿದ್ದು, ಇರಾನ್ ಇಸ್ರೇಲ್ ವಿರುದ್ಧ ನಿರೀಕ್ಷಿತವಲ್ಲದ ಪ್ರತಿದಾಳಿ ನಡೆಸಿದೆ. ಟೆಲ್ ಅವಿವ್ ಸೇರಿದಂತೆ ಇಸ್ರೇಲ್‌ನ ಪ್ರಮುಖ ನಗರಗಳ ಮೇಲೆ ಸುಮಾರು 400 ಕ್ಷಿಪಣಿಗಳನ್ನು ಹಾರಿಸಲಾಗಿದೆ. ಇಸ್ರೇಲ್‌ನ ಹೋಲೋನ್‌ನಲ್ಲಿ ಕ್ಷಿಪಣಿಗಳು ಅಪ್ಪಳಿಸಿದ್ದು, ದಟ್ಟ ಹೊಗೆ ಆವರಿಸಿದೆ. ಇನ್ನು ಈ ಸಂಘರ್ಷ ಇಸ್ರೇಲ್‌ಗೆ ಮಾತ್ರ ಸೀಮಿತವಾಗಿಲ್ಲ. ಇರಾನ್ ಅರಬ್ ರಾಷ್ಟ್ರಗಳಾದ ಬಹರೈನ್, ಕತಾರ್, ಕುವೈತ್, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್ ಮೇಲೂ ದಾಳಿ ನಡೆಸಿದೆ. ಬಹರೈನ್ ಮತ್ತು ಕತಾರ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳು ಸಹ ಇರಾನ್‌ನ ಗುರಿಯಾಗಿವೆ. ಕತಾರ್ ರಾಜಧಾನಿ ದೋಹಾದಲ್ಲಿ ಸ್ಪೋಟದ ಸದ್ದು ಕೇಳಿಬಂದಿದೆ. ಇದರ ಪರಿಣಾಮವಾಗಿ ಭಾರತಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನಗಳು ರದ್ದುಗೊಂಡಿದ್ದು, ಭಾರತಕ್ಕೆ ವಾಪಸಾಗಿವೆ. ಇಸ್ರೇಲ್‌ನಲ್ಲಿ ವಾಸಿಸುತ್ತಿರುವ ಕನ್ನಡಿಗರು ಸುರಕ್ಷಿತ ಸ್ಥಳಗಳಾದ ಬಂಕರ್‌ಗಳಿಗೆ ತೆರಳಿ ಆಶ್ರಯ ಪಡೆಯುತ್ತಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಕನ್ನಡಿಗರೊಬ್ಬರು ಮಾತನಾಡಿದ್ದು ಹೀಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More