ಇರಾನ್ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಇಸ್ರೇಲ್ ಇರಾನ್‌ನ ಕ್ಷಿಪಣಿ ತಾಣಗಳು ಮತ್ತು ವಾಯು ರಕ್ಷಣಾ ವ್ಯವಸ್ಥೆಗಳ ಮೇಲೆ ದಾಳಿ ಮಾಡುವ ಅಪರೂಪದ ದೃಶ್ಯಗಳನ್ನು ಬಿಡುಗಡೆ ಮಾಡಿದೆ. ಇರಾನ್‌ನ ವೇಗವಾಗಿ ಮುಂದುವರಿಯುತ್ತಿರುವ ಪರಮಾಣು ಕಾರ್ಯಕ್ರಮದಿಂದ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ ಇಸ್ರೇಲ್ ದಾಳಿ ನಡೆಸಿದೆ. ಇದನ್ನು ಇಸ್ರೇಲ್ ತನ್ನ ಅಸ್ತಿತ್ವಕ್ಕೆ ಬೆದರಿಕೆ ಎಂದು ಪರಿಗಣಿಸುತ್ತದೆ. ಈ ದಾಳಿಗಳು ಇಸ್ರೇಲ್ ವಾಯುಪಡೆಗೆ ಬಹಳ ಮುಖ್ಯದ್ದಾಗಿದೆ ಇಸ್ರೇಲ್ ರಕ್ಷಣಾ ಪಡೆಗಳು (IDF) ತಿಳಿಸಿವೆ.
ಜೆರುಸಲೇಂ, ಜೂನ್ 13: ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ (Israel Air Strike) ನಡೆಸಿದೆ. ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸಾದ್ ಇರಾನ್‌ನೊಳಗೆ ತನ್ನ ರಹಸ್ಯ ಕಾರ್ಯಾಚರಣೆಗಳನ್ನು ಪ್ರದರ್ಶಿಸುವ ಅಪರೂಪದ ದೃಶ್ಯಗಳನ್ನು ಬಿಡುಗಡೆ ಮಾಡಿದೆ. ದಿ ಟೈಮ್ಸ್ ಆಫ್ ಇಸ್ರೇಲ್ ವರದಿಯ ಪ್ರಕಾರ, ಇರಾನ್ ದೇಶದ ಬ್ಯಾಲಿಸ್ಟಿಕ್ ಕ್ಷಿಪಣಿ ಮೂಲಸೌಕರ್ಯ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸುತ್ತಿರುವ ಬೃಹತ್ ದಾಳಿಯ ಭಾಗವಾಗಿರುವ ಇಬ್ಬರು ರಹಸ್ಯ ಏಜೆಂಟ್‌ಗಳು ಇರಾನಿನ ಪ್ರದೇಶದೊಳಗಿನಿಂದ ಕ್ಷಿಪಣಿಗಳನ್ನು ಉಡಾಯಿಸುತ್ತಿರುವುದನ್ನು ಈ ದೃಶ್ಯಗಳು ತೋರಿಸುತ್ತವೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos