ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ITಗೆ ದೂರು
ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದೆ. ಬಳ್ಳಾರಿಯಲ್ಲಿ ಮೃತಪಟ್ಟ ರಾಜಶೇಖರ್ ಕುಟುಂಬಕ್ಕೆ ಜಮೀರ್ 25 ಲಕ್ಷ ರೂಪಾಯಿ ನಗದು ಪರಿಹಾರ ನೀಡಿದ್ದರು. ಇದು ಆರ್.ಬಿ.ಐ. ನಿಯಮಗಳ ಉಲ್ಲಂಘನೆಯಾಗಿದ್ದು, ಹಣದ ಮೂಲದ ಬಗ್ಗೆ ತನಿಖೆಗೆ ಹಿಂದೂಪರ ಕಾರ್ಯಕರ್ತ ತೇಜಸ್ ಗೌಡ ದೂರು ನೀಡಿದ್ದಾರೆ.
ಬೆಂಗಳೂರು, ಜನವರಿ 06: ಬಳ್ಳಾರಿಯಲ್ಲಿ ನಡೆದ ಗಲಾಟೆ ವೇಳೆ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ರೂ ನಗದನ್ನು ಪರಿಹಾರವಾಗಿ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಲಾಗಿದೆ. ಹಿಂದೂಪರ ಕಾರ್ಯಕರ್ತ ತೇಜಸ್ ಗೌಡ ಅವರು ದೂರು ನೀಡಿದ್ದು, ಸಚಿವರು ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತದ ಯಾವುದೇ ಆರ್ಥಿಕ ವ್ಯವಹಾರವನ್ನು ಬ್ಯಾಂಕಿಂಗ್ ಮಾರ್ಗದ ಮೂಲಕವೇ ನಡೆಸಬೇಕು ಎಂಬ ನಿಯಮವನ್ನು ಸಚಿವರು ಉಲ್ಲಂಘಿಸಿದ್ದಾರೆ. ಈ ನಗದು ಹಣದ ಮೂಲ ಮತ್ತು ಅದು ಲೆಕ್ಕಪತ್ರಕ್ಕೆ ಸಿಗುವ ಹಣವೇ ಅಥವಾ ಕಪ್ಪು ಹಣವೇ ಎಂಬ ಬಗ್ಗೆ ತನಿಖೆ ನಡೆಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
