Budget 2023 | ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ರೂಪಿಸಿದಂತಿದೆ: ಡಿಕೆ ಶಿವಕುಮಾರ್

Budget 2023 | ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ರೂಪಿಸಿದಂತಿದೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on:Feb 01, 2023 | 4:06 PM

ರಾಗಿಯನ್ನು ಸಿರಿಧಾನ್ಯಗಳ ಪಟ್ಟಿಗೆ ಸೇರಿಸಲಾಗಿದ್ದರೂ ಅದಕ್ಕೆ ಕನಿಷ್ಟ ಬೆಂಬಲ ಬೆಲೆ ಘೋಷಿಸಿಲ್ಲ, ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಬಜೆಟ್ ಮಂಡನೆಯನ್ನು (Budget presentation) ವೀಕ್ಷಿಸಲು ಸಾಧ್ಯವಾಗಿಲ್ಲ, ಫೋನಲ್ಲೇ ಒಂದಷ್ಟು ನೋಡಿದ್ದು, ಅದನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿದ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ರೂಪಿಸಲಾಗಿದೆ ಅಂತ ಹೇಳಲಾಗುತ್ತಿದೆ, ನಮ್ಮ ರೈತರನ್ನು (farmers) ಪುನಃ ಕಡೆಗಣಿಸಲಾಗಿದೆ ಎಂದು ಅವರು ಹೇಳಿದರು. ರಾಗಿಯನ್ನು ಸಿರಿಧಾನ್ಯಗಳ ಪಟ್ಟಿಗೆ ಸೇರಿಸಲಾಗಿದ್ದರೂ ಅದಕ್ಕೆ ಕನಿಷ್ಟ ಬೆಂಬಲ ಬೆಲೆ ಘೋಷಿಸಿಲ್ಲ, ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 01, 2023 04:06 PM