ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್
ರೇಣುಕಾ ಸ್ವಾಮಿ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ತೂಗುದೀಪ ಜಾಮೀನು ಸಿಗುವ ನಿರೀಕ್ಷೆಯಲ್ಲಿರುವಾಗಲೇ ಅವರ ವಿರುದ್ಧ ಐಟಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಬಳ್ಳಾರಿ ಜೈಲಿಗೆ ಭೇಟಿ ನೀಡಿ ದರ್ಶನ್ ತೂಗುದೀಪ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ಚಾಲ್ತಿಯಲ್ಲಿದ್ದು, ಇದೇ 29ಕ್ಕೆ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ. ಜಾಮೀನು ಸಿಕ್ಕು ತಾವು ಹೊರಗೆ ಬರುವ ಉಮೇದಿನಲ್ಲಿ ದರ್ಶನ್ ಇರುವ ಸಂದರ್ಭದಲ್ಲಿಯೇ ಅವರ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ಐಟಿ ಅಧಿಕಾರಿಗಳು ದರ್ಶನ್ ವಿರುದ್ಧ ದೂರು ದಾಖಲಿಸಿಕೊಂಡಿದ್ದು ಇಂದು ಬಳ್ಳಾರಿ ಜೈಲಿಗೆ ಭೇಟಿ ನೀಡಿ ದರ್ಶನ್ ವಿಚಾರಣೆ ನಡೆಸಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮುಚ್ಚಿ ಹಾಕಲು ಬಳಸಿದ ಹಣ, ದರ್ಶನ್ರ ಮನೆ ಮಹಜರಿನ ವೇಳೆ ಸಿಕ್ಕ ನಗದು ಹಣ ಇನ್ನಿತರೆ ವಿಚಾರವಾಗಿ ಐಟಿ ಅಧಿಕಾರಿಗಳು ದರ್ಶನ್ರ ವಿಚಾರಣೆ ನಡೆಸಲಿದ್ದಾರೆ. ವಿಚಾರಣೆ ನಡೆಸಲು ಜೈಲಿಗೆ ಬಂದಿದ್ದ ಐಟಿ ಅಧಿಕಾರಿಗಳನ್ನು ಕಾಣಲು ಖುಷಿಯಾಗಿಯೇ ಹೋಗಿದ್ದಾರೆ ನಟ ದರ್ಶನ್. ಇಲ್ಲಿದೆ ನೋಡಿ ವಿಡಿಯೋ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 26, 2024 02:06 PM