ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
IT Raid on Shilpa Shetty Pub; ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ, ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಬ್ಯಾಸ್ಟಿಯನ್ ಪಬ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ದಾಳಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಈಗಾಗಲೇ ಕೆಲವು ಪ್ರಕರಣಗಳನ್ನು ಎದುರಿಸುತ್ತಿರುವುದರಿಂದ, ಈ ದಾಳಿಯು ಅವುಗಳ ಮುಂದುವರಿದ ಭಾಗವೇ ಎಂಬ ಪ್ರಶ್ನೆ ಮೂಡಿದೆ.
ಬೆಂಗಳೂರು, ಡಿಸೆಂಬರ್ 17: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಮೇಲೆ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ ಜನಪ್ರಿಯ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ ನಡೆದಿದೆ. ಈ ದಾಳಿಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಈಗಾಗಲೇ ಹಲವು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಈ ಐಟಿ ದಾಳಿಯು ಆ ಹಿಂದಿನ ಪ್ರಕರಣಗಳ ಮುಂದುವರಿದ ಭಾಗವೇ ಅಥವಾ ಪಬ್‌ಗೆ ಸಂಬಂಧಿಸಿದ ಇತರ ವಿವಾದಗಳಿಗೆ ಸಂಬಂಧಿಸಿದ್ದೇ ಎಂಬ ಪ್ರಶ್ನೆಗಳು ಮೂಡಿವೆ. ಬ್ಯಾಸ್ಟಿಯನ್ ಪಬ್ ಬೆಂಗಳೂರಿನ ಅತ್ಯಂತ ದುಬಾರಿ ಪಬ್‌ಗಳಲ್ಲಿ ಒಂದಾಗಿದೆ. ಐಟಿ ಅಧಿಕಾರಿಗಳು ಸದ್ಯ ಪಬ್‌ನಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
