ಬೆಂಗಳೂರು: ಪ್ರೆಸ್ಟೀಜ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ
ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್‌ನ ನಾಲ್ಕು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. 50ಕ್ಕೂ ಹೆಚ್ಚು ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ಮೆಂಟ್ ನಿರ್ಮಾಣ ಸೇರಿದಂತೆ ಹಲವು ಉದ್ಯಮಗಳನ್ನು ಹೊಂದಿದೆ.
ಬೆಂಗಳೂರು, ಫೆಬ್ರವರಿ 25: ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಎಂಜಿ ರಸ್ತೆಯಲ್ಲಿನ ಪ್ರೆಸ್ಟೀಜ್ ಗ್ರೂಪ್ ಮುಖ್ಯ ಕಚೇರಿ ಸೇರಿಂದತೆ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಸುಮಾರು 50 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರೆಸ್ಟೀಜ್ ಗ್ರೂಪ್ನಿಂದ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ಮೆಂಟ್ ನಿರ್ಮಾಣ ಸೇರಿ ಹಲವು ಉದ್ಯಮಗಳನ್ನು ಹೊಂದಿದೆ.
ವರದಿ: ಪ್ರದೀಪ್ ಚಿಕ್ಕಾಟಿ
Published on: Feb 25, 2025 09:52 AM
Latest Videos