ಬೆಂಗಳೂರಿನಲ್ಲಿ ಸಂಜೆ ದಿಢೀರ್​ ಸುರಿದ ಮಳೆ.. ವರುಣಾರ್ಭಟಕ್ಕೆ ಸವಾರರು ಫುಲ್​ ಶಾಕ್, ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Sep 13, 2023 | 8:29 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಧಾರಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ವಾಹನ ಸವಾರರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಚಿಕ್ಕಬಾಣಾವಾರ ರೈಲ್ವೆ ಅಂಡರ್ ಪಾಸ್​ನಲ್ಲಿ ಮಳೆ ನೀರು ತುಂಬಿದೆ. ಇನ್ನು ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.

ಬೆಂಗಳೂರು, ಸೆ.13: ನಗರದಲ್ಲಿ ಇಂದು(ಸೆ.13)ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ ಮಲ್ಲಸಂದ್ರ, ಸೇರಿದಂತೆ ಹಲವು ಕಡೆ ಮಳೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲದಲ್ಲೂ ಧಾರಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ವಾಹನ ಸವಾರರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಚಿಕ್ಕಬಾಣಾವಾರ ರೈಲ್ವೆ ಅಂಡರ್ ಪಾಸ್​ನಲ್ಲಿ ಮಳೆ ನೀರು ತುಂಬಿದೆ. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವಾರದಲ್ಲಿ ಸತತ ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಯಿಂದ ವಾಹನಗಳು ನೀರಲ್ಲೇ ಸಾಗುತ್ತಿವೆ. ಇನ್ನು ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More