ಎಐಸಿಸಿ ನೂತನ ಕಟ್ಟಡವನ್ನು ಬಹಳ ಚೆನ್ನಾಗಿ ನಿರ್ಮಿಸಿದ್ದಾರೆ, ನಿರ್ಮಾಣಕ್ಕೆ 15 ವರ್ಷ ಹಿಡಿದಿದೆ: ಸಿದ್ದರಾಮಯ್ಯ
ಜಾತಿಗಣತಿ ವರದಿಯನ್ನು ನಾಳಿನ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವುದಿಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಅದನ್ನು ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. ಜಾತಿಗಣತಿ ವರದಿಯಲ್ಲಿ ಏನಿದೆ ಅಂತ ತನಗೇ ಗೊತ್ತಿಲ್ಲ, ಅದನ್ನು ಇನ್ನೂ ಬಹಿರಂಗ ಮಾಡಿಲ್ಲ, ಕೇವಲ ಊಹಾಪೋಹದ ಅಂಕಿಅಂಶಗಳ ಮೇಲೆ ಕೆಲವರು ಚರ್ಚೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ನವದೆಹಲಿ: ದೇಶದ ರಾಜಧಾನಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿಎಂ ಸಿದ್ದರಾಮಯ್ಯ, ಎಐಸಿಸಿ ನೂತನ ಕಚೇರಿ ಉದ್ಘಾಟನೆಯಾಗಿದೆ, ಮನಮೋಹನ ಸಿಂಗ್ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಶುರುವಾದ ಕಟ್ಟಡದ ಕಾಮಗಾರಿ 15 ವರ್ಷಗಳ ನಂತರ ಪೂರ್ಣಗೊಂಡಿದೆ ಎಂದು ಹೇಳಿದರು. ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಬಹಳ ಚೆನ್ನಾಗಿ ಮಾತಾಡಿದರು ಎಂದು ಹೇಳಿದ ಸಿದ್ದರಾಮಯ್ಯ, 2023ರಲ್ಲಿ ರಾಮಮಂದಿರ ಲೋಕಾರ್ಪಣೆಯ ನಂತರವೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಅಂತ ಅರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ಹೇಳಿರುವುದಕ್ಕೆ ಅರ್ಥವಿಲ್ಲ, 1947ರಲ್ಲಿ ಬ್ರಿಟಿಷರನ್ನು ಭಾರತದಿಂದ ತೊಲಗಿಸಿದ ಕ್ಷಣವೇ ಭಾರತಲ್ಲೆ ಸ್ವಾತಂತ್ರ್ಯ ಸಿಕ್ಕಿದ್ದು ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಭ್ರಷ್ಟಾಚಾರ ಆರೋಪ: ಸಿದ್ದರಾಮಯ್ಯ ಸಂಪುಟದ ಮತ್ತೋರ್ವ ಸಚಿವ ವಿರುದ್ಧ ರಾಜ್ಯಪಾಲರಿಗೆ ದೂರು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್

