ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣಕ್ಕೆ 11 ಕೋಟಿ ರೂ. ಬಿಡುಗಡೆ ಮಾಡಿದ್ದು ನಾನು: ಗಾಲಿ ಜನಾರ್ಧನ ರೆಡ್ಡಿ, ಕೆಆರ್ ಪಿಪಿ ಅಧ್ಯಕ್ಷ

ಅರುಣ್​ ಕುಮಾರ್​ ಬೆಳ್ಳಿ

Updated on: Mar 02, 2023 | 2:19 PM

ಹಿಂದೆ ಬಿಎಸ್ ಯಡಿಯೂರಪ್ಪನವರ ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವನಾಗಿದ್ದಾಗ ಹಣ ಬಿಡುಗಡೆ ಮಾಡಿದ್ದೆ ಎಂದು ಅವರು ಹೇಳುತ್ತಾರೆ

ಕೊಪ್ಪಳ: ಅತ್ತ ಬೆಳಗಾವಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ (Basavaraj S Bommai) ಅವರು ಲೋಕಾರ್ಪಣೆ ಮಾಡಿದ ಶಿವಾಜಿ ಪ್ರತಿಮೆ ಬಗ್ಗೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಶ್ರೇಯಸ್ಸು ತೆಗೆದುಕೊಳ್ಳುವ ಪ್ರಯತ್ನದಲ್ಲಿ ಮುಳುಗಿದ್ದರೆ ಇತ್ತ ಕೊಪ್ಪಳದ ಗಂಗಾವತಿಯಲ್ಲಿ ಮಾತಾಡಿದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy) ಅವರು ಪ್ರತಿಮೆ ನಿರ್ಮಾಣಕ್ಕೆ ರೂ. 11 ಕೋಟಿ ಅನುದಾನ ಬಿಡುಗಡೆ ಮಾಡಿದ್ದು ತಾನು ಎಂದು ಹೇಳುತ್ತ್ತಿದ್ದಾರೆ. ಹಿಂದೆ ಬಿಎಸ್ ಯಡಿಯೂರಪ್ಪನವರ (BS Yediyurappa) ಸಂಪುಟದಲ್ಲಿ ಪ್ರವಾಸೋದ್ಯಮ ಸಚಿವನಾಗಿದ್ದಾಗ ಹಣ ಬಿಡುಗಡೆ ಮಾಡಿದ್ದೆ ಎಂದು ಅವರು ಹೇಳುತ್ತಾರೆ. ಜನ ನೂರಾರು ವರ್ಷಗಳ ಕಾಲ ನೆನಪಿಡುವಂಥ ಕೆಲಸಗಳನ್ನು ತಾನು ಮಾಡಿರುವುದಾಗಿ ರೆಡ್ಡಿ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.