ಕರ್ನಾಟಕದಲ್ಲಿ 40 ಪರ್ಸೆಂಟ್ ಸರ್ಕಾರವಿದೆ ಅಂತ ಹೇಳಿದ್ದು ನಾನಲ್ಲ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಹೇಳಿದ್ದು: ಸಿದ್ದರಾಮಯ್ಯ
ರಾಜ್ಯದಲ್ಲಿ ಅಧಿಕಾರದಲ್ಲಿರೋದು 40 ಪರ್ಸೆಂಟ್ ಕಮೀಶನ್ ಸರ್ಕಾರ ಅಂತ ಹೇಳಿದ್ದು ನಾನಲ್ಲ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಒಂದು ವರ್ಷದಷ್ಟು ಹಿಂದೆಯೇ ಪ್ರಧಾನಿಗಳಿಗೆ ಹಾಗೆ ಪತ್ರ ಬರೆದಿದ್ದರು ಎಂದು ವಿರೋಧ ಪಕ್ಷದ ನಾಯಕ ಹೇಳಿದರು.
ಶಿವಮೊಗ್ಗ: ರಾಜ್ಯದಲ್ಲಿ ಸರ್ಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ, ‘ನಾ ಖಾವೂಂಗಾ ನಾ ಖಾನೆದೂಂಗ’ ಅನ್ನುತ್ತಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಘೋಷವಾಕ್ಯ ಈಗ ‘ಖಾವೂಂಗಾ ಔರ್ ಖಾನೆದೂಂಗ’ ಆಗಿ ಬದಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗೇಲಿ ಮಾಡಿದರು. ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದ ಅವರು ತಾವು ಮುಖ್ಯಮಂತ್ರಿಯಾಗಿದ್ದಾಗ ಪೊಲೀಸ ಇಲಾಖೆಗೆ ಸಂಬಂಧಿಸಿದ ವರ್ಗಾವಣೆಗಳಿಗೆ ಒಂದೇ ಒಂದು ರೂಪಾಯಿ ತೆಗೆದುಕೊಳ್ಳುತ್ತಿರಲಿಲ್ಲ. ಆದರೆ ಈಗ ಚೆನ್ನಾಗಿ ‘ಕಮಾಯಿ’ ಇರುವ ಠಾಣೆಗೆ ಟ್ರಾನ್ಸ್ಫರ್ ಬೇಕು ಅಂತಾದರೆ ರೂ. 40 ಲಕ್ಷಗಳಿಂದ 1 ಕೋಟಿ ರೂ. ವರೆಗೆ ಡಿಮ್ಯಾಂಡ್ ಮಾಡುತ್ತಾರೆ, ಎಂದು ಹೇಳಿದರು. ರಾಜ್ಯದಲ್ಲಿ ಅಧಿಕಾರದಲ್ಲಿರೋದು 40 ಪರ್ಸೆಂಟ್ ಕಮೀಶನ್ ಸರ್ಕಾರ ಅಂತ ಹೇಳಿದ್ದು ನಾನಲ್ಲ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಒಂದು ವರ್ಷದಷ್ಟು ಹಿಂದೆಯೇ ಪ್ರಧಾನಿಗಳಿಗೆ ಹಾಗೆ ಪತ್ರ ಬರೆದಿದ್ದರು ಎಂದು ವಿರೋಧ ಪಕ್ಷದ ನಾಯಕ ಹೇಳಿದರು.