ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಿದ್ರೆ ಒಳ್ಳೆಯದು: ವಿಜಯೇಂದ್ರಗೆ ಹರಿಪ್ರಸಾದ್ ತಿರುಗೇಟು

Edited By:

Updated on: Jul 10, 2026 | 3:06 PM

ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಬಿ.ವೈ.ವಿಜಯೇಂದ್ರರನ್ನು ಬೇಬಿ ಯಡಿಯೂರಪ್ಪ ಎಂದು ಕರೆದಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮೇಲಿನ ಪ್ರಕರಣಗಳ ಕುರಿತು ಪ್ರಶ್ನಿಸಿದವರಿಗೆ, ಯಡಿಯೂರಪ್ಪರವರ ಹಗರಣಗಳನ್ನು ನೆನಪಿಸಿದ್ದಾರೆ. ರಾಮ ಮಂದಿರ ನಿಧಿ ಅಕ್ರಮ ಹಾಗೂ ಪ್ರಧಾನಿ ಮೋದಿ ರಾಜೀನಾಮೆಗೆ ಹರಿಪ್ರಸಾದ್ ಆಗ್ರಹಿಸಿದ್ದಾರೆ. ಸಿಬಿಐ ತನಿಖೆ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಜುಲೈ 10: ಸೋನಿಯಾ ಗಾಂಧಿ ಮೇಲೆ ಯಾವುದೇ ಪ್ರಕರಣಗಳಿಲ್ಲವೇ ಎಂದು ಪ್ರಶ್ನಿಸುವ ಮೊದಲು, ಚೆಕ್ ಮೂಲಕ ಲಂಚ ಪಡೆದು ಜೈಲಿಗೆ ಹೋಗಿದ್ದ ಬಿಎಸ್​ ಯಡಿಯೂರಪ್ಪ ಇತಿಹಾಸವನ್ನು ನೆನಪಿಸಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​​ ತಿರುಗೇಟು ನೀಡಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿವೈ ವಿಜಯೇಂದ್ರ ಮಾಡಿರುವ ಟೀಕೆಗಳಿ ಬಗ್ಗೆ ಮಾತನಾಡಿದ ಅವರು, ವಿಜಯೇಂದ್ರರನ್ನ ಬೇಬಿ ಯಡಿಯೂರಪ್ಪ ಎಂದು ಕರೆದಿದ್ದಾರೆ. ತಮ್ಮ ನಾಯಕರ ಮೇಲಿನ ಆರೋಪಗಳಿಗೆ ಬೇಬಿ ಯಡಿಯೂರಪ್ಪ ಉತ್ತರಿಸಿದ್ದರೆ ಚೆನ್ನಾಗಿತ್ತು ಎಂದು ಕಿಡಿಕಾರಿದ್ದಾರೆ. ರಾಷ್ಟ್ರೀಯ ಹೆರಾಲ್ಡ್ ಪ್ರಕರಣವು 10 ವರ್ಷದಿಂದ ನಡೆಯುತ್ತಿದೆ. ಅದು ನ್ಯಾಷನಲ್ ಹೆರಾಲ್ಡ್ ಕಂಪನಿ‌ ಆ್ಯಕ್ಟ್​ನಲ್ಲಿದೆ. ಇದರಲ್ಲಿ 10 ರೂ ತೆಗೆದುಕೊಳ್ಳಲು ಆಗುವುದಿಲ್ಲ, 10 ರೂ ಕೊಡಲು ಆಗುವುದಿಲ್ಲ. ಕೇಂದ್ರದಲ್ಲಿ ಸರ್ಕಾರ ತಮ್ಮದೇ ಇರುವುದರಿಂದ, ಏನಾದರೂ ಅವ್ಯವಹಾರ ನಡೆದಿರುವುದು ಸಾಬೀತಾದರೆ, ಅದನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸುವಂತೆ ಸವಾಲು ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jul 10, 2026 03:05 PM
Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More