ಜಮೀರ್​ ಚುನಾವಣಾ ಪ್ರಚಾರಕ್ಕೆ ಬರುತ್ತಾರಾ ಎಂದಿದ್ದಕ್ಕೆ ಸಚಿವ ಮಲ್ಲಿಕಾರ್ಜುನ ಏನಂದ್ರು ನೋಡಿ

Edited By:

Updated on: Mar 28, 2026 | 5:23 PM

ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸಾದಿಕ್ ಪೈಲ್ವಾನ್ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಎಲ್ಲರೂ ಒಗ್ಗಟ್ಟಾಗಿ, ಶಾಂತಿಯುತವಾಗಿ ಚುನಾವಣೆ ಎದುರಿಸುವಂತೆ ಕರೆ ನೀಡಿದರು. ಸಾದಿಕ್ ಪೈಲ್ವಾನ್ ಜೊತೆಗಿನ ಮಾತುಕತೆಯಲ್ಲಿ ಯಾವುದೇ ವಿಳಂಬವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ದಾವಣಗೆರೆ, ಮಾರ್ಚ್​ 28: ಸಚಿವ ಜಮೀರ್​ ಅಹ್ಮದ್​ರನ್ನು ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದೇನೆ. ಇದೀಗ ಅವರು​ ಕೇರಳ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬರದಿದ್ದರೂ ಒಳ್ಳೆಯದೇ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆ ಇಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್​​ ನಗರದ ವೆಂಕಾಭೋವಿ ಕಾಲೋನಿಯಲ್ಲಿರುವ ಸಾದಿಕ್ ಪೈಲ್ವಾನ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಸರಿ ಹೋಗಿದೆ, ನಾವು ಸಾದಿಕ್ ಪೈಲ್ವಾನ್ ಎಲ್ಲಾ ಒಂದೇ. ಎಲ್ಲಾ ಒಂದಾಗಿ ಚುನಾವಣೆ ಮಾಡುತ್ತೇವೆ. ಯಾರು ಕೂಡ ಇಲ್ಲ ಸಲ್ಲದ ಹೇಳಿಕೆಯನ್ನು ಕೊಡುವುದು ಬೇಡ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸಹ ಪರಿಚಯಸ್ಥರೇ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More