AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರೋಗ್ಯ, ಯಶಸ್ಸು ನಿಮ್ಮದಾಗಲಿ’; ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

‘ಆರೋಗ್ಯ, ಯಶಸ್ಸು ನಿಮ್ಮದಾಗಲಿ’; ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

ಸುಷ್ಮಾ ಚಕ್ರೆ
|

Updated on: Sep 17, 2026 | 8:53 PM

Share

ಕಳೆದ ಕೆಲವು ವರ್ಷಗಳಿಂದ ಭಾರತ ಮತ್ತು ಇಟಲಿ ನಡುವಿನ ರಾಜತಾಂತ್ರಿಕ, ರಕ್ಷಣೆ ಮತ್ತು ಆರ್ಥಿಕ ಸಂಬಂಧಗಳು ಗಣನೀಯವಾಗಿ ವೃದ್ಧಿಸಿವೆ. ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಯುಎಇ ನಾಯಕರು ಸೇರಿದಂತೆ ಜಗತ್ತಿನ ಹಲವು ಪ್ರಮುಖ ಜಾಗತಿಕ ನಾಯಕರು ಶುಭಾಶಯ ಕೋರಿದ್ದಾರೆ.

ರೋಮ್, ಸೆಪ್ಟೆಂಬರ್ 17: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಇಟಲಿ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಶೇಷ ಸಂದೇಶ ಹಂಚಿಕೊಂಡಿರುವ ಅವರು, ಪ್ರಧಾನಿ ಮೋದಿಯವರಿಗೆ ಶುಭ ಹಾರೈಸಿದ್ದಾರೆ. “ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ, ಅಪಾರ ಶಕ್ತಿ ಮತ್ತು ಸದಾ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ” ಎಂದು ಮೆಲೋನಿ ಬರೆದುಕೊಂಡಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಭಾರತ ಮತ್ತು ಇಟಲಿ ನಡುವಿನ ರಾಜತಾಂತ್ರಿಕ, ರಕ್ಷಣೆ ಮತ್ತು ಆರ್ಥಿಕ ಸಂಬಂಧಗಳು ಗಣನೀಯವಾಗಿ ವೃದ್ಧಿಸಿವೆ. ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಯುಎಇ ನಾಯಕರು ಸೇರಿದಂತೆ ಜಗತ್ತಿನ ಹಲವು ಪ್ರಮುಖ ಜಾಗತಿಕ ನಾಯಕರು ಶುಭಾಶಯ ಕೋರಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us