ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು

Edited By:

Updated on: Oct 07, 2024 | 5:49 PM

ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗ ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್ಚಿಗೆ ಮಾತನಾಡದೆ, ಇದು ಮೌನವಾಗಿರುವ ಕಾಲ ಎಂದು ಹೇಳಿದ್ದಾರೆ.

ಚಿತ್ರದುರ್ಗ, ಅಕ್ಟೋಬರ್​​ 07: ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀ (Chitradurga Murugha Shri)  ಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಆಗಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸವೇಶ, ಮುರುಘೇಶನ ಆರ್ಶಿವಾದದಿಂದ ನಾನು ಬಂಧನದಿಂದ ಬಿಡುಗಡೆ ಆಗಿದ್ದೇನೆ. ಹೆಚ್ಚಿಗೆ ಹೇಳುವುದಕ್ಕೆ ಇದು ಸಕಾಲವಲ್ಲ, ಇದು ಮೌನವಾಗಿರುವ ಕಾಲ. ಸತ್ಯಕ್ಕೆ ಜಯ ಸಿಗುವ ನಿರೀಕ್ಷೆಯಿದೆ, ಸ್ವಾಮೀಜಿಗಳಿಗೆ ಸಹನೆ ಮುಖ್ಯ. ನಾನು ಜೈಲು ಸೇರಿದ ಬಳಿಕ‌ ನಾಲ್ಕು ನೂರು ಪುಸ್ತಕ ಓದಿರುವೆ. 5 ಪುಸ್ತಕ ಬರೆದಿರುವೆ, ಐದು ಪುಸ್ತಕ ಒಮ್ಮೆಯೇ ಬಿಡುಗಡೆ ಮಾಡುವೆ ಎಂದು ಹೇಳಿದ್ದಾರೆ. ಬಳಿಕ ಕಾರಿನಲ್ಲಿ ದಾವಣಗೆರೆಯತ್ತ ತೆರಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Oct 07, 2024 05:47 PM
Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More