ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಮುಖ್ಯಮಂತ್ರಿಗಳದ್ದು: ಡಿಕೆ ಶಿವಕುಮಾರ
ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಶಾಂತಿ ಸುವ್ಯವಸ್ಥೆ ಕದಡುವ ಕೆಲಸ ಕಾಂಗ್ರೆಸ್ ನಾಯಕರು ಮಾಡುವುದಿಲ್ಲ, ರಾಜ್ಯದಲ್ಲಿ ಶಾಂತಿ ನೆಲೆಸುವುದನ್ನು ನೋಡಿಕೊಳ್ಳುವ ಜವಾಬ್ದಾರಿ ಮುಖ್ಯಮಂತ್ರಿಗಳದ್ದು ಎಂದು ಅವರು ಹೇಳಿದರು.
ಬೆಂಗಳೂರು: ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿ ಗೋಡೆಯ ಮೇಲಿದ್ದ ತಮ್ಮ ಫೋಟೋ ಮೇಲೆ ಬಿಜೆಪಿ ಕಾರ್ಯಕರ್ತರು ವೀರ ಸಾವರ್ಕರ್ (Veer Savarkar) ಅವರ ಫೋಟೋ ಅಂಟಿಸಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಅವರು, ಈ ಕೃತ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಉತ್ತರ ನೀಡಬೇಕು ಅಂತ ಹೇಳಿದರು. ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಶಾಂತಿ ಸುವ್ಯವಸ್ಥೆ ಕದಡುವ ಕೆಲಸ ಕಾಂಗ್ರೆಸ್ ನಾಯಕರು ಮಾಡುವುದಿಲ್ಲ, ರಾಜ್ಯದಲ್ಲಿ ಶಾಂತಿ ನೆಲೆಸುವುದನ್ನು ನೋಡಿಕೊಳ್ಳುವ ಜವಾಬ್ದಾರಿ ಮುಖ್ಯಮಂತ್ರಿಗಳದ್ದು ಎಂದು ಅವರು ಹೇಳಿದರು.
Latest Videos