Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಅಧ್ಯಕ್ಷನ ಬದಲಾವಣೆಯೂ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಜಿ ಪರಮೇಶ್ವರ್

ಕೆಪಿಸಿಸಿ ಅಧ್ಯಕ್ಷನ ಬದಲಾವಣೆಯೂ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಜಿ ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ
|

Updated on: May 22, 2024 | 12:07 PM

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಯಾವುದೇ ಸುದ್ದಿ ಇಲ್ಲ, ಹಾಗೇನಾದರೂ ಇದ್ದರೆ ಅದು ಲೋಕಸಭಾ ಚುನಾವಣೆ ಫಲಿತಾಂಶಗಳು ಪ್ರಕಟಗೊಂಡ ನಂತರ ನಡೆಯಬಹುದು, ಯಾವುದಕ್ಕೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವೇ ಅಂತಿಮವಾಗಿರುತ್ತದೆ ಎಂದು ಹೇಳಿದರು.

ಬೆಂಗಳೂರು: ಸ್ಥಳೀಯ ಸಂಘಸಂಸ್ಥೆಗಳು (local bodies) ಸಮರ್ಪಕವಾಗಿ ಕೆಲಸ ಮಾಡಬೇಕಾದರೆ ಅವುಗಳಲ್ಲಿ ಜನಪ್ರತಿನಿಧಿಗಳಿರಬೇಕು, ಬಿಬಿಎಂಪಿ (BBMP), ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಮೊದಲಾದ ಸಂಸ್ಥೆಗಳ ಚುನಾವಣೆ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದೆ. ಚುನಾವಣೆಯ ವಿಷಯ ನ್ಯಾಯಾಲಯದಲ್ಲಿದೆ, ಪ್ರಾಯಶಃ ಚುನಾವಣೆಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಿ ಅಂತ ಅಲ್ಲಿಂದ ಸಲಹೆ ಸೂಚನೆಗಳು ಬಂದಿರಬಹುದು, ಹಾಗಾಗೇ ಪಕ್ಷದ ರಾಜ್ಯಾಧ್ಯಕ್ಷರು ಸ್ಥಳೀಯ ಸಂಘ ಸಂಸ್ಥೆಗಳ ಚುನಾವಣೆ ಬಗ್ಗೆ ಮಾತಾಡಿರುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಯಾವುದೇ ಸುದ್ದಿ ಇಲ್ಲ, ಹಾಗೇನಾದರೂ ಇದ್ದರೆ ಅದು ಲೋಕಸಭಾ ಚುನಾವಣೆ ಫಲಿತಾಂಶಗಳು ಪ್ರಕಟಗೊಂಡ ನಂತರ ನಡೆಯಬಹುದು, ಯಾವುದಕ್ಕೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವೇ ಅಂತಿಮವಾಗಿರುತ್ತದೆ ಎಂದು ಹೇಳಿದರು. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತಾಡಿದ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ಬೇರೊಬ್ಬರನ್ನು ಅಯ್ಕೆ ಮಾಡುವ ಬಗ್ಗೆ ಸುಳಿವು ನೀಡಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಂತ್ರಸ್ತೆಯರಿಗೆ ಬೆದರಿಕೆ ಕರೆ ಮತ್ತು ದೇವರಾಜೇಗೌಡ ವಿರುದ್ಧ ದೂರನ್ನು ಎಸ್ಐಟಿ ಅಧಿಕಾರಿಗಳು ವಿಚಾರಿಸಿಕೊಳ್ಳುತ್ತಾರೆ: ಜಿ ಪರಮೇಶ್ವರ್