ಪಕ್ಷಭೇದ ಮರೆತು, ಭಾರತೀಯರೆಲ್ಲ ಒಗ್ಗಟ್ಟಾಗಿ ಕೇಂದ್ರದ ಜೊತೆ ನಿಲ್ಲಬೇಕಿದೆ: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

ಅರುಣ್​ ಕುಮಾರ್​ ಬೆಳ್ಳಿ

Updated on: Apr 26, 2025 | 4:40 PM

ಭಾರತೀಯರೆಲ್ಲ ಒಗ್ಗಟ್ಟಾಗಿರಬೇಕು, ಬೇರೆ ವಿಷಯಗಳ ಬಗ್ಗೆ ಚರ್ಚೆ ಅನಾವಶ್ಯಕ, ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ, ಅದರೆ ಈ ಸಂದರ್ಭದಲ್ಲಿ ಕಾಂಗ್ರೆಸ್ ಕೇಂದ್ರದ ಜೊತೆ ನಿಲ್ಲಬೇಕೆಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಹೇಳಿದ್ದಾರೆ, ಮುಖ್ಯಮಂತ್ರಿಯಾದಿಯಾಗಿ ನಾವೆಲ್ಲ ಕೇಂದ್ರ ಸರಕಾರದ ಜೊತೆ ನಿಲ್ಲುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಬೆಳಗಾವಿ, ಏಪ್ರಿಲ್ 26: ದೇಶದ ನಿವಾಸಿಗಳೆಲ್ಲ ಒಗ್ಗಟ್ಟಿನಿಂದ ಪರಿಸ್ಥಿತಿಯನ್ನು ಎದುರಿಸುವುದು ಸಮಯದ ಸದ್ಯದ ಕರೆಯಾಗಿದೆ, ನಾವು ಆ ಪಕ್ಷ ಈ ಪಕ್ಷ ಅಂತ ಹೇಳಿಕೊಳ್ಳುವುದಲ್ಲ, ಕೇಂದ್ರದಲ್ಲಿರುವ ಸರ್ಕಾರ ನಮ್ಮದಲ್ಲ ಅಂತೆಲ್ಲ ಯೋಚಿಸುವ ಅವಶ್ಯಕತೆ ನಮಗಿಲ್ಲ, ನಮ್ಮ ದೇಶದ ಅಮಾಯಕ ನಾಗರಿಕರ ಮೇಲೆ ಉಗ್ರರು ದಾಳಿ ಮಾಡಿ ಕೊಂದಿದ್ದಾರೆ, ಅವರನ್ನು ಸದೆಬಡಿಯಬೇಕಿದೆ ಎಂದು ಮಹಿಳಾಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಭಯೋತ್ಪಾದಕರು ಮತ್ತು ಭಯೋತ್ಪಾದನೆಯನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡರೂ ನಮ್ಮ ಸರ್ಕಾರ ಕೇಂದ್ರದೊಂದಿಗೆ ನಿಲ್ಲುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಪಹಲ್ಗಾಮ್ ದಾಳಿಯ ತಟಸ್ಥ ತನಿಖೆಗೆ ಸಿದ್ಧ; ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಭರವಸೆ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.