Karnataka Assembly Polls: ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಬಿಜೆಪಿಯನ್ನು ಕಟ್ಟಿ ಬೆಳೆಸಿದ ತಮಗೆ ಟಿಕೆಟ್ ನಿರಾಕರಿಸಿದ್ದು ಆಘಾತವಾಯಿತು ಎಂದರು!

|

Updated on: Apr 17, 2023 | 10:44 AM

ಪಕ್ಷದಿಂದ ಎಲ್ಲ ಗೌರವಾದರಗಳು ಸಿಕ್ಕರೂ ಈ ಬಾರಿಯ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ್ದು ಆಘಾತವನ್ನುಂಟು ಮಾಡಿತು ಎಂದು ಶೆಟ್ಟರ್ ಹೇಳಿದರು.

ಬೆಂಗಳೂರು: ಕಳೆದೊಂದು ವಾರದಿಂದ ಜಗದೀಶ್ ಶೆಟ್ಟರ್ (Jagadish Shettar) ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುವ ವದಂತಿ ಹಳ್ಳಿಯಿಂದ ದಿಲ್ಲಿವರೆಗೆ ಚರ್ಚೆಯ ವಿಷಯವಾಗಿತ್ತು. ನಿನ್ನೆ ಶೆಟ್ಟರ್ ಬಿಜೆಪಿಗೆ ರಾಜೀನಾಮೆ (resignation) ಸಲ್ಲಿಸಿದ ಬಳಿಕ ಅದು ಅರ್ಧ ನಿಜವಾಗಿತ್ತು ಮತ್ತು ಇಂದು ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಿದ ನಂತರ ಪೂರ್ತಿ ನಿಜವಾಗಿದೆ. ಹುಬ್ಬಳ್ಳಿ ಗ್ರಾಮಂತರ ಮತ್ತು ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರಗಳಿಂದ 6 ಬಾರಿ ಗೆದ್ದು ಒಮ್ಮೆ ಮುಖ್ಯಮಂತ್ರಿಯಾಗಿ, ಸಚಿವನಾಗಿ ಮತ್ತು ಎರಡು ಬಾರಿ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿದ ತಮಗೆ ಬಿಜೆಪಿ ಕಳೆದ ಕೆಲ ವಾರಗಳಿಂದ ಬಹಳ ಕೆಟ್ಟದಾಗಿ ನಡೆಸಿಕೊಂಡಿತು. ಪಕ್ಷದಿಂದ ಎಲ್ಲ ಗೌರವಾದರಗಳು ಸಿಕ್ಕರೂ ಈ ಬಾರಿಯ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ್ದು ಆಘಾತವನ್ನುಂಟು ಮಾಡಿತು ಎಂದು ಶೆಟ್ಟರ್ ಹೇಳಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal), ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ  ಮತ್ತು ಇನ್ನಿತರ ನಾಯಕರ ಸಮ್ಮುಖದಲ್ಲಿ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 17, 2023 10:36 AM