Loading video

ನಿರ್ಮಲಾ ಸೀತಾರಾಮನ್ ಬಜೆಟ್​ಗೆ ಸಿದ್ದರಾಮಯ್ಯರಿಂದ ಉತ್ತಮ ಪ್ರತಿಕ್ರಿಯೆ ಸಾಧ್ಯವಿಲ್ಲ: ವಿಜಯೇಂದ್ರ

|

Updated on: Feb 06, 2025 | 2:14 PM

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಆಪ್ ಸೋಲಾಗಲಿದೆ ಮತ್ತು ಬಿಜೆಪಿ 27-ವರ್ಷಗಳ ನಂತರ ಅಧಿಕಾರಕ್ಕೆ ಬರಲಿದೆ ಎಂದು ಸುಮಾರು 9-10 ಚುನಾವಣಾ ಸಮೀಕ್ಷೆಗಳು ಹೇಳಿವೆ. ಭ್ರಷ್ಟಾಚಾರದ ವಿರುದ್ಧ ಆಂದೋಳನ ನಡೆಸಿ ಅಧಿಕಾರದ ಚುಕ್ಕಾಣಿ ಹಿಡಿದು ಜನರನ್ನು ಗ್ಯಾರಂಟಿ ಯೋಜನೆಗಳ ಮೂಲಕ ಬೇಸ್ತು ಬೀಳಿಸಿದ ಆಪ್ ಗೆ ಈ ಬಾರಿ ತಕ್ಕ ಶಾಸ್ತಿಯಾಗಲಿದೆ ಎಂದು ವಿಜಯೇಂದ್ರ ಹೇಳಿದರು.

ಬೆಂಗಳೂರು: ನಗರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವ ವಿಕ್ಸಿತ್ ಭಾರತ್ ಆಶಯಕ್ಕೆ ಪೂರಕವಾದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸಿದರು. ₹ 12ಲಕ್ಷ ವಾರ್ಷಿಕ ಆದಾಯ ಇರುವವರು ಯಾವುದೇ ತೆರಿಗೆ ಕಟ್ಟಬೇಕಿರದ ಯೋಜನೆಯನ್ನು ಅವರು ಜಾರಿಗೆ ತಂದಿರೋದು ಶ್ಲಾಘನೀಯ. ಅವರು ಮಂಡಿಸಿರುವ ಬಜೆಟ್ ಬಡವರು, ರೈತರು, ಯುವಕರು ಮತ್ತು ಮಹಿಳೆಯರಿಗೆ ಬಹಳ ಅನುಕೂಲವಾಗಲಿದೆ ಎಂದು ವಿಜಯೇಂದ್ರ ಹೇಳಿದರು. ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ನೀಡಿದ ಪ್ರತಿಕ್ರಿಯೆ ಗಮನಿಸಿದೆ, ಅವರಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸುವುದು ಸಾಧ್ಯವಿಲ್ಲ ಎಂದು ವಿಜಯೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವಿಜಯೇಂದ್ರ ವಿರುದ್ಧ ಯತ್ನಾಳ್ ಬಣ ಗೆರಿಲ್ಲಾ ಯುದ್ಧ! ದಲಿತ, ಒಬಿಸಿ ಆಯ್ತು ಈಗ ಲಿಂಗಾಯತ ಅಸ್ತ್ರ