ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರವನ್ನು ತ್ಯಾಗ ಮಾಡಬೇಕು: ಬಸನಗೌಡ ಪಾಟೀಲ್ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 19, 2024 | 12:57 PM

ಸಿಪಿ ಯೋಗೇಶ್ವರ್ ಎನ್​ಡಿಎ ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಬೇಕೆಂದು ಬಿಜೆಪಿ ಹಿರಿಯ ನಾಯಕ ಅರ್ ಅಶೋಕ ಹೇಳಿದ್ದಾರೆ ಎಂದು ಬಸನಗೌಡ ಯತ್ನಾಳ್ ಹೇಳಿದರು. ಅದು ಸರಿ, ಆದರೆ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಯನ್ನು ರೀ ಲಾಂಚ್ ಮಾಡಲು ಉತ್ಸುಕರಾಗಿರುವ ಹೆಚ್ ಡಿ ಕುಮಾರಸ್ವಾಮಿಗೆ ಈ ಮಾತುಗಳು ರುಚಿಸಿಯಾವೇ?

ಹುಬ್ಬಳ್ಳಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ದೊಡ್ಡ ಹೃದಯ ಪ್ರದರ್ಶಿಸಿ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು, ಆವರು ಬಿಜೆಪಿ ಜೊತೆ ಕೈ ಜೋಡಿಸಿರುವುದರಿಂದ ದಕ್ಷಿಣ ಕರ್ನಾಟಕ ಭಾಗದಲ್ಲಿ ತಮ್ಮ ಪಕ್ಷಕ್ಕೆ ಅನುಕೂಲವಾಗಿರುವಂತೆಯೇ ಪುನಶ್ಚೇತನಗೊಳ್ಳಲು ಜೆಡಿಎಸ್ ಪಕ್ಷಕ್ಕೂ ನೆರವಾಗಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರಾಹುಲ್​ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ಧ ಬಳಕೆ: ಯತ್ನಾಳ್​ ವಿರುದ್ಧ ದೂರು

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.