ಅನುಭವಿ ರಾಜಕಾರಣಿಯಾಗಿರುವ ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಲಿ: ಪ್ರಿಯಾಂಕ್ ಖರ್ಗೆ, ಸಚಿವ

ಅನುಭವಿ ರಾಜಕಾರಣಿಯಾಗಿರುವ ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಲಿ: ಪ್ರಿಯಾಂಕ್ ಖರ್ಗೆ, ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 30, 2023 | 12:26 PM

ಯತಿಂದ್ರ ಸಿದ್ದರಾಮಯ್ಯ ಒಬ್ಬ ಮಾಜಿ ಶಾಸಕನಾಗಿದ್ದಾರೆ ಮತ್ತು ಅವರ ತಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದರಿಂದ ಕ್ಷೇತ್ರದ ಜನ ಅವರಲ್ಲಿಗೆ ಹೋಗಿ ದೂರು ದುಮ್ಮಾನಗಳನ್ನು ಹೇಳಿಕೊಳ್ಳುತ್ತಾರೆ. ಸರ್ಕಾರದ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಯಾವುದಾದರೂ ಮಂತ್ರಿ ದೂರಿದ್ದಾರಾ? ಎಂದು ಖರ್ಗೆ ಪ್ರಶ್ನಿಸಿದರು.

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿಯವರು (HD Kumaraswamy) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪುತ್ರ ಯತೀಂದ್ರ ಸಿದ್ದರಾಮಯ್ಯ (Yatindra Siddaramaiah) ವಿರುದ್ಧ ಮಾಡುತ್ತಿರುವ ಆಪಾದನೆಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಟಿವಿ9 ಕನ್ನಡ ವಾಹಿನಿಯ ವರದಿಗಾರೊಂದಿಗೆ ಮಾತಾಡಿದ ಖರ್ಗೆ, ರಾಜಕಾರಣದಲ್ಲಿ ಸಾಕಷ್ಟು ಅನುಭವಸ್ಥರಾಗಿರುವ ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಲಿ, ಮಾಡುವ ಆರೋಪಗಳಿಗೆ ಸಾಕ್ಷ್ಯಗಳಿದ್ದರೆ ಅವುಗಳನ್ನು ಸಾರ್ವಜನಿಕಗೊಳಿಸಲಿ ಮತ್ತು ತನಿಖಾ ಸಂಸ್ಥೆಗಳಿಗೆ ನೀಡಲಿ, ಸರಕಾರ ತನಿಖೆ ಮಾಡಿಸಲು ತಯಾರಿದೆ ಎಂದು ಹೇಳಿದರು. ಯತಿಂದ್ರ ಸಿದ್ದರಾಮಯ್ಯ ಒಬ್ಬ ಮಾಜಿ ಶಾಸಕನಾಗಿದ್ದಾರೆ ಮತ್ತು ಅವರ ತಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದರಿಂದ ಕ್ಷೇತ್ರದ ಜನ ಅವರಲ್ಲಿಗೆ ಹೋಗಿ ದೂರು ದುಮ್ಮಾನಗಳನ್ನು ಹೇಳಿಕೊಳ್ಳುತ್ತಾರೆ. ಸರ್ಕಾರದ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಯಾವುದಾದರೂ ಮಂತ್ರಿ ದೂರಿದ್ದಾರಾ? ಸುಖಾಸುಮ್ಮನೆ ಪೆನ್ ಡ್ರೈವ್ ಕೈಯಲ್ಲಿ ಹಿಡಿದು ಅಬ್ಬರಿಸಿದರೆ ಪ್ರಯೋಜನವಿಲ್ಲ ಎಂದು ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ