Siddaramaiah: ಗ್ಯಾರಂಟಿಗಳು ನಿಖರವಾಗಿ ಯಾವತ್ತಿನಿಂದ ಜಾರಿ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು, ಜನರ ಅಸಹನೆ ಹೆಚ್ಚುತ್ತಿದೆ!
ರಾಜ್ಯದ ಹಲವಾರು ಭಾಗಗಳಲ್ಲಿ ಜನ ವಿದ್ಯುತ್ ಬಿಲ್ ಕಟ್ಟದೆ ಅದನ್ನು ಕೇಳಲು ಹೋದ ಎಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡುತ್ತಿದ್ದಾರೆ.
ಬೆಂಗಳೂರು: ಸಂಪುಟ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) 5 ಗ್ಯಾರಂಟಿಗಳ ಬಗ್ಗೆ ಮಾತಾಡಿದರು. ಮುಂದಿನ ಸಭೆಗೆ ಎಲ್ಲಾ ವಿವರಗಳನ್ನು ತೆಗೆದುಕೊಂಡು ಬರುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ, ಅವುಗಳ ಪರಾಮರ್ಶೆ ನಡೆಸಿ ಒಂದು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ವಿರೋಧ ಪಕ್ಷಗಳು ತಾವು ನೀಡಿದ ಭರವಸೆಗಳನ್ನು ಯಾವತ್ತೂ ಈಡೇರಿಸಲಿಲ್ಲ. ನಮ್ಮದು ಅವರಂತಲ್ಲ, ಹಿಂದೆಯೂ ನಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ, ಈಗಲೂ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು. ಸಿದ್ದರಾಮಯ್ಯನವರು ಆಡಿದ ಮಾತುಗಳು ಸ್ಪಷ್ಟವಾಗಿರಲಿಲ್ಲ. ಅವರು ಆದಷ್ಟು ಬೇಗ ಗ್ಯಾರಂಟಿಗಳ ಬಗ್ಗೆ ಸ್ಪಷ್ಟನೆ ನೀಡಬೇಕು. ಪ್ರತಿಸಲ ಮಾಧ್ಯಮಗಳ ಮುಂದೆ ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ (cabinet meeting) ನಿರ್ಧಾರ ತೆಗೆದುಕೊಳ್ಳುತ್ತೇವೆ ಅಂತ ಹೇಳುತ್ತಾ ಕೂರಲಾಗದು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಮಾಡಿದ ಭಾಷಣದಲ್ಲಿ ಅವರು ‘ಇವತ್ತೇ, ಇಂದೇ ಗ್ಯಾರಂಟಿಗಳು ಜಾರಿಗೆ ಬರುತ್ತವೆ’ ಅಂತ ಜೋರು ಧ್ವನಿಯಲ್ಲಿ ಹೇಳಿದ್ದು ಇಡೀ ಕರ್ನಾಟಕ ಕೇಳಿಸಿಕೊಂಡಿತ್ತು.
ಜನ ಗ್ಯಾರಂಟಿಗಳ ಪ್ರಯೋಜನ ಪಡೆಯಲು ತವಕಿಸುತ್ತಿದ್ದಾರೆ. ಸರ್ಕಾರದ ಆದೇಶ ತಡವಾದಂತೆ ಅವರಲ್ಲಿ ಅಸಹನೆ ಹೆಚ್ಚುತ್ತದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವತ್ತಿಂದ ಗ್ಯಾರಂಟಿಗಳು ಜಾರಿಗೆ ಬರುತ್ತವೆ ಅಂತ ಸ್ಪಷ್ಟವಾಗಿ ಹೇಳಬೇಕು. ರಾಜ್ಯದ ಹಲವಾರು ಭಾಗಗಳಲ್ಲಿ ಜನ ವಿದ್ಯುತ್ ಬಿಲ್ ಕಟ್ಟದೆ ಅದನ್ನು ಕೇಳಲು ಹೋದ ಎಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ