Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಮಾತಾಡಲು ಇನ್ನೂ ಕಾಲ ಪಕ್ವವಾಗಿಲ್ಲ: ವಿ ಸೋಮಣ್ಣ, ಬಿಜೆಪಿ ನಾಯಕ

ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಮಾತಾಡಲು ಇನ್ನೂ ಕಾಲ ಪಕ್ವವಾಗಿಲ್ಲ: ವಿ ಸೋಮಣ್ಣ, ಬಿಜೆಪಿ ನಾಯಕ

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 09, 2023 | 1:49 PM

ಮೈತ್ರಿ ಪ್ರಸ್ತಾಪವನ್ನು ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಸ್ತಾಪಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಜೆಡಿಎಸ್ ಮುಖಂಡ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕೇಳಿದರೆ, ವಿಷಯದ ಬಗ್ಗೆ ಅಮೇಲೆ ಮತಾಡುತ್ತೇನೆ ಅಂತ ಹೇಳುತ್ತಾರೆ. ಅಸಲಿಗೆ ಏನು ನಡೀತಿದೆ ಅಂತ ಗೊತ್ತಾಗುತ್ತಿಲ್ಲ ಮಾರಾಯ್ರೇ.

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ನಡುವೆ ಕೆಲವು ಕ್ಷೇತ್ರಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಎರಡೂ ಪಕ್ಷಗಳ ನಾಯಕರ್ಯಾರೂ ಸ್ಪಷ್ಟವಾಗಿ ಯಾವುದನ್ನೂ ಹೇಳುತ್ತಿಲ್ಲ. ನಗರದಲ್ಲಿಂದದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿ ಸೋಮಣ್ಣ (V somanna), ಮೈತ್ರಿ ಬಗ್ಗೆ ಈಗಲೇ ಹೇಳಿಕೆ ನೀಡುವುದು ಅಕಾಲಿಕ (pre-mature) ಅನಿಸುತ್ತೆ ಎಂದು ಹೇಳಿದರು. ರಾಜ್ಯ ಬಿಜೆಪಿ ನಾಯಕರು ಮೊದಲಿಗೆ ರಾಷ್ಟ್ರೀಯ ನಾಯಕರೊಂದಿಗೆ (BJP national leaders) ಮಾತಾಡಬೇಕಿದೆ, ಇದುವರೆಗೆ ಅಲ್ಲಿಂದ ಯಾವುದೇ ಸೂಚನೆ ಸಿಕ್ಕಿಲ್ಲ ಎಂದು ಸೋಮಣ್ಣ ಹೇಳಿದರು. ಮುಂದುವರಿದು ಮಾತಾಡಿದ ಅವರು, ತಾವು ಖುದ್ದು, ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಷ್ಟ್ರೀಯ ನಾಯಕರೊಂದಿಎಗ ಚರ್ಚಿಸುವುದಾಗಿ ಹೇಳಿದರು. ಮೈತ್ರಿ ಪ್ರಸ್ತಾಪವನ್ನು ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರಸ್ತಾಪಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಜೆಡಿಎಸ್ ಮುಖಂಡ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕೇಳಿದರೆ, ವಿಷಯದ ಬಗ್ಗೆ ಅಮೇಲೆ ಮತಾಡುತ್ತೇನೆ ಅಂತ ಹೇಳುತ್ತಾರೆ. ಅಸಲಿಗೆ ಏನು ನಡೀತಿದೆ ಅಂತ ಗೊತ್ತಾಗುತ್ತಿಲ್ಲ ಮಾರಾಯ್ರೇ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ