ಒಬ್ಬ ಮಾಜಿ ಸಿಎಂ ಆಗಿ ಕುಮಾರಸ್ವಾಮಿ ಬಳಸಿದ್ದು ಸಂಸ್ಕಾರವಂತರ ಭಾಷೆ ಅಲ್ಲ: ಎನ್ ಚಲುವರಾಯಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ ಹೆಣ್ಣುಮಕ್ಕಳ ಬಗ್ಗೆ ಹಗುರವಾಗಿ ಮಾತಾಡಿರುವುದನ್ನು ಪ್ರಸ್ತಾಪಿಸಿದ ಚಲುವರಾಯಸ್ವಾಮಿ, ಅವರು ಬಳಸಿರುವ ಭಾಷೆ ಸಂಸ್ಕಾರವಂತರು ಬಳಸುವ ಭಾಷೆ ಅಲ್ಲ, ಹಿಂದೆ ಒಬ್ಬ ರೈತಮಹಿಳೆಯ ಬಗ್ಗೆಯೂ ಅವರು ಅವಹೇಳನಕಾರಿಯಾಗಿ ಮಾತಾಡಿದ್ದರು, ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ ಹೀಗೆ ಸಂಸ್ಕಾರಹೀನರಾಗಿ ಮಾತಾಡುವುದು ಎಷ್ಟರಮಟ್ಟಿಗೆ ಸರಿ ಅನ್ನೋದನ್ನು ಅವರೇ ಯೋಚನೆ ಮಾಡಬೇಕು ಎಂದು ಹೇಳಿದರು.
ಮಂಡ್ಯ: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (Venkatramanegowda) (ಸ್ಟಾರ್ ಚಂದ್ರು) ಪರ ಎಡೆಬಿಡದೆ ಪ್ರಚಾರ ಮಾಡುತ್ತಿರುವ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy), ಚಂದ್ರು ನಾಗಮಂಗಲದವರಾಗಿರುವುದರಿಂದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದು ಹೇಳಿದರು. ಕ್ಷೇತ್ರದ ಎಲ್ಲ ಭಾಗಗಳಲ್ಲಿ ಈಗಾಗಲೇ ಎರಡೆರಡು ಸಲ ಪ್ರಚಾರ ಮಾಡಲಾಗಿದೆ ಮತ್ತು 17 ರಂದು ರಾಹುಲ್ ಗಾಂಧಿ (Rahul Gandhi) ಆಗಮಿಸಲಿದ್ದಾರೆ ಎಂದು ಹೇಳಿದ ಸಚಿವ, ಅದಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಚಾರಕ್ಕೆ ಅಗಮಿಸಲಿದ್ದಾರೆ ಎಂದರು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೆಣ್ಣುಮಕ್ಕಳ ಬಗ್ಗೆ ಹಗುರವಾಗಿ ಮಾತಾಡಿರುವುದನ್ನು ಪ್ರಸ್ತಾಪಿಸಿದ ಚಲುವರಾಯಸ್ವಾಮಿ, ಅವರು ಬಳಸಿರುವ ಭಾಷೆ ಸಂಸ್ಕಾರವಂತರು ಬಳಸುವ ಭಾಷೆ ಅಲ್ಲ, ಹಿಂದೆ ಒಬ್ಬ ರೈತಮಹಿಳೆಯ ಬಗ್ಗೆಯೂ ಅವರು ಅವಹೇಳನಕಾರಿಯಾಗಿ ಮಾತಾಡಿದ್ದರು, ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ ಹೀಗೆ ಸಂಸ್ಕಾರಹೀನರಾಗಿ ಮಾತಾಡುವುದು ಎಷ್ಟರಮಟ್ಟಿಗೆ ಸರಿ ಅನ್ನೋದನ್ನು ಅವರೇ ಯೋಚನೆ ಮಾಡಬೇಕು ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಒಂದೇ ಕುಟುಂಬಕ್ಕೆ ಎಷ್ಟು ಸಲ ಅವಕಾಶ ಕೊಡುತ್ತೀರಿ? ಶ್ರೇಯಸ್ ಪಟೇಲ್ ಕೂಡ ರಾಜಕೀಯ ಹಿನ್ನೆಲೆಯ ಕುಟುಂಬದವರು: ಎನ್ ಚಲುವರಾಯಸ್ವಾಮಿ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

