ಜವಾಬ್ದಾರಿಯುತ ಸ್ಥಾನದಲ್ಲಿರುವ ಡಿಕೆ ಸುರೇಶ್ ಬೇಜವಾಬ್ದಾರಿ ಹೇಳಿಕೆ ನೀಡಬಾರದು: ಬಿವೈ ವಿಜಯೇಂದ್ರ

ರಾಜ್ಯಕ್ಕೆ ಸಿಗುತ್ತಿರುವ ಅನುದಾನಗಳ ಬಗ್ಗೆ ಸುರೇಶ್ ಗ್ರಹಿಕೆ ಸಂಪೂರ್ಣ ತಪ್ಪು, ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಗಳಾಗಿದ್ದ 2004-2014 ರ ಹತ್ತು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ಸಿಕ್ಕ ಅನುದಾನ ಕೇವಲ 60,000 ಕೋಟಿ ರೂ. ಮಾತ್ರ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಹತ್ತ ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ 2,36,000 ಕೋಟಿ ರೂ. ಅನುದಾನ ಸಿಕ್ಕಿದೆ ಎಂದು ವಿಜಯೇಂದ್ರ ಹೇಳಿದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ಡಿಕೆ ಸುರೇಶ್ ಬೇಜವಾಬ್ದಾರಿ ಹೇಳಿಕೆ ನೀಡಬಾರದು: ಬಿವೈ ವಿಜಯೇಂದ್ರ
|

Updated on: Feb 01, 2024 | 6:22 PM

ಹುಬ್ಬಳ್ಳಿ: ಭಾರತ ದೇಶದ ಸಮಸ್ತ ನಾಗರಿಕರು ಸಂವಿಧಾನದ 75 ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh) ಅವರು ಪ್ರತ್ಯೇಕ ದಕ್ಷಿಣ ಭಾರತ ರಾಷ್ಟ್ರದ (independent South India) ಬಗ್ಗೆ ಮಾತಾಡಿವುದು ದುರದೃಷ್ಟಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಸುರೇಶ್ ಅವರು ಒಬ್ಬ ಸಂಸದನಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವವರು, ಹೀಗೆ ಬೇಜವಾಬ್ದಾರಿ ಮಾತುಗಳನ್ನಾಡುವುದು ಅವರಿಗೆ ಶೋಭೆ ನೀಡೋದಿಲ್ಲ ಎಂದರು. ಕೇಂದ್ರದಿಂದ ರಾಜ್ಯಕ್ಕೆ ಸಿಗುತ್ತಿರುವ ಅನುದಾನಗಳ ಬಗ್ಗೆ ಅವರ ಗ್ರಹಿಕೆ ಸಂಪೂರ್ಣ ತಪ್ಪು, ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಗಳಾಗಿದ್ದ 2004-2014 ರ ಹತ್ತು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ಸಿಕ್ಕ ಅನುದಾನ ಕೇವಲ 60,000 ಕೋಟಿ ರೂ. ಮಾತ್ರ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಹತ್ತ ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ 2,36,000 ಕೋಟಿ ರೂ. ಅನುದಾನ ಸಿಕ್ಕಿದೆ. ತೆರಿಗೆ ಸಂಗ್ರಹದಿಂದ ರಾಜ್ಯಕ್ಕೆ ಸಿಗುವ ಅನುದಾನದ ಬಗ್ಗೆ ಹೇಳೋದಾದರೆ, ಸಿಂಗ್ ಅವರ ಅವಧಿಯಲ್ಲಿ ರಾಜ್ಯಕ್ಕೆ 81,000 ಕೋಟಿ ರೂ. ಸಿಕ್ಕರೆ ಮೋದಿ ಅವರ ಅವಧಿಯಲ್ಲಿ 2,82,000 ಕೋಟಿ ರೂ. ಸಿಕ್ಕಿದೆ. ಡಿಕೆ ಸುರೇಶ್ ಮಾತಾಡುವಾಗ ದಾಖಲೆಗಳನ್ನು ಸರಿಯಾಗಿ ನೋಡಿಕೊಂಡು ಮಾತಾಡಬೇಕು ಎಂದು ವಿಜಯೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us