ಬೆಥೆಲ್ ಸ್ಪಿನ್​ಗೆ ‘ತಿರುಗಿ’ ಬಿದ್ದ ಶ್ರೀಲಂಕಾ

Updated on: Feb 04, 2026 | 9:53 AM

Sri Lanka vs England, 3rd T20I: ಶ್ರೀಲಂಕಾ ತಂಡವು 19.3 ಓವರ್​ಗಳಲ್ಲಿ 116 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಇಂಗ್ಲೆಂಡ್ ತಂಡ 12 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. 

ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಆದರೆ ಈ ಬಾರಿ ಗೆದ್ದಿರುವುದು ಕೇವಲ 12 ರನ್​ಗಳ ಅಂತರದಿಂದ. ಈ ಗೆಲುವಿನ ರೂವಾರಿ ಜೇಕಬ್ ಬೆಥೆಲ್. ಪಲ್ಲೆಕೆಲ್ಲೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 128 ರನ್​ಗಳು ಮಾತ್ರ.

129 ರನ್​ಗಳ ಸುಲಭ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡವು 15 ಓವರ್​ಗಳಲ್ಲಿ 97 ರನ್ ಕಲೆಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ಜೇಕಬ್ ಬೆಥೆಲ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು.

ಅಂತಿಮ ಹಂತದಲ್ಲಿ 3.3 ಓವರ್​ಗಳನ್ನು ಎಸೆದ ಬೆಥೆಲ್ ಕೇವಲ 11 ರನ್ ನೀಡಿ 4 ವಿಕೆಟ್ ಉರುಳಿಸಿದರು. ಪರಿಣಾಮ ಶ್ರೀಲಂಕಾ ತಂಡವು 19.3 ಓವರ್​ಗಳಲ್ಲಿ 116 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಇಂಗ್ಲೆಂಡ್ ತಂಡ 12 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More