Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್​ ಟ್ರೋಫಿ ಗೆದ್ದ ಬಳಿಕ ಟೀಮ್ ಇಂಡಿಯಾ ಆಟಗಾರರ 'ಗಂಗ್ನಮ್ ಸ್ಟೈಲ್' ಡ್ಯಾನ್ಸ್

ಚಾಂಪಿಯನ್ಸ್​ ಟ್ರೋಫಿ ಗೆದ್ದ ಬಳಿಕ ಟೀಮ್ ಇಂಡಿಯಾ ಆಟಗಾರರ ‘ಗಂಗ್ನಮ್ ಸ್ಟೈಲ್’ ಡ್ಯಾನ್ಸ್

ಝಾಹಿರ್ ಯೂಸುಫ್
|

Updated on: Mar 10, 2025 | 7:09 AM

Champions Trophy 2025 Final: ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 49 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 254 ರನ್ ಬಾರಿಸಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ನ್ಯೂಝಿಲೆಂಡ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿ ಭಾರತ ತಂಡ ವಿಶ್ವ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 49 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 254 ರನ್ ಬಾರಿಸಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರಾದ ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ ಹಾಗೂ ಹರ್ಷಿತ್ ರಾಣಾ ಮೈದಾನದಲ್ಲಿ ಗಂಗ್ನಮ್ ಸ್ಟೈಲ್ ಡ್ಯಾನ್ಸ್ ಮಾಡಿ ಸಂಭ್ರಮಿಸಿದರು. ಇದೀಗ ಈ ವಿಡಿಯೋ ವೈರಲ್ ಆಗಿದೆ.