Karnataka Assembly Polls; ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಹೀನಾಯ ಸೋಲು ಅನುಭವಿಸಲಿದ್ದಾರೆ: ಅಮಿತ್ ಶಾ

Karnataka Assembly Polls; ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಹೀನಾಯ ಸೋಲು ಅನುಭವಿಸಲಿದ್ದಾರೆ: ಅಮಿತ್ ಶಾ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 25, 2023 | 6:40 PM

ಬಿಜೆಪಿ ಅಧಿಕಾರಕ್ಕೆ ಬಂದರೆ ಬಸವರಾಜ ಬೊಮ್ಮಾಯಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರಾ ಎಂದು ಕೇಳಿದ ಪ್ರಶ್ನೆಗೆ ಅವರು ಈಗಂತೂ ಅವರೇ ಮುಖ್ಯಮಂತ್ರಿಯಾಗಿದ್ದಾರಲ್ಲಾ ಅಂತ ಹಾರಿಕೆಯ ಉತ್ತರ ನೀಡಿದರು.

ಯಾದಗಿರಿ: ರಾಜ್ಯದಲ್ಲಿ ಬಿಜೆಪಿ ಬಹುಮತಕ್ಕಿಂತ ಹೆಚ್ಚಿನ ಸೀಟುಗಳನ್ನು ಗೆದ್ದು ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ಯಾದಗಿರಿಯಲ್ಲಿ ಹೇಳಿದರು. ನಗರದಲ್ಲಿ ಬೃಹತ್ ರೋಡ್ ಶೋ ನಡೆಸುತ್ತಾ ಟಿವಿ9 ಕನ್ನಡ ವಾಹಿನಿ ವರದಿಗಾರನೊಂದಿಗೆ ಮಾತಾಡಿದ ಸಚಿವರು ಪಕ್ಷ ತೊರೆದ ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ (Jagadish Shettar) ಮತ್ತು ಲಕ್ಷ್ಮಣ ಸವದಿ (Laxman Savadi) ಹೀನಾಯ ಸೋಲು ಅನುಭವಿಸಲಿದ್ದಾರೆ ಎಂದು ಅಮಿತ್ ಶಾ ಹೇಳಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಬಸವರಾಜ ಬೊಮ್ಮಾಯಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರಾ ಎಂದು ಕೇಳಿದ ಪ್ರಶ್ನೆಗೆ ಅವರು ಈಗಂತೂ ಅವರೇ ಮುಖ್ಯಮಂತ್ರಿಯಾಗಿದ್ದಾರಲ್ಲಾ ಅಂತ ಹಾರಿಕೆಯ ಉತ್ತರ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ