AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ತನ್ನ ಕರ್ಮಭೂಮಿ ಎನ್ನುವ ಶೆಟ್ಟರ್ ಜಿಲ್ಲೆಗೆ ನೀಡಿರುವ ಕೊಡುಗೆಯಾದರೂ ಏನು? ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

ಬೆಳಗಾವಿ ತನ್ನ ಕರ್ಮಭೂಮಿ ಎನ್ನುವ ಶೆಟ್ಟರ್ ಜಿಲ್ಲೆಗೆ ನೀಡಿರುವ ಕೊಡುಗೆಯಾದರೂ ಏನು? ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 28, 2024 | 7:05 PM

Share

ಬಿಜೆಪಿ ಕಾರ್ಯಕರ್ತರೇ ಶೆಟ್ಟರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಅಂದರೆ ಅವರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿದೆ, ಅವರು ಮಾತ್ರವಲ್ಲ ಬೆಳಗಾವಿ ಕ್ಷೇತ್ರದ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ, ಬೆಳಗಾವಿ ತಮ್ಮ ಕರ್ಮಭೂಮಿ ಎಂದು ಹೇಳುವ ಅವರಿಗೆ ನಾಚಿಕೆಯಾಗಬೇಕು, ಬೆಳಗಾವಿ ಜಿಲ್ಲೆಗೆ ಅವರು ನೀಡಿರುವ ಕೊಡುಗೆದಾದರೂ ಏನು? ಎಂದು ಲಕ್ಷ್ಮಿ ಕೇಳಿದರು.

ಬೆಳಗಾವಿ: ಸಾಮಾನ್ಯವಾಗಿ ಸಾಫ್ಟ್ ಸ್ಪೋಕನ್ ಅನಿಸಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಮ್ಮ ಮಗನಿಗಾಗಿ ಲೋಕಸಭಾ ಚುನಾವಣೆಯಲ್ಲಿ ಕೊಂಚ ಟಫ್ ಆಗಿರುವಂತಿದೆ. ಬೆಳಗಾವಿಯಲ್ಲಿ ಇಂದು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವೆ ತಮ್ಮ ಮಗ ಮೃಣಾಲ್ (Mrinal Hebbalkar) ಪ್ರತಿಸ್ಪರ್ಧಿ ಮತ್ತು ಹಿರಿಯ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ (Jagadish Shettar) ವಿರುದ್ಧ ಉರಿದುಬಿದ್ದರು. ಶೆಟ್ಟರ್ ವಿರುದ್ಧ ಬೆಳಗಾವಿಯಲ್ಲಿ ನಡೆಯುತ್ತಿರುವ ಗೋ ಬ್ಯಾಕ್ ಶೆಟ್ಟರ್ ಅಭಿಯಾನದಿಂದ ಖಂಡಿತವಾಗಿಯೂ ತಮಗೆ ಲಾಭವಾಗಲಿದೆ ಎಂದು ಅವರು ಹೇಳಿದರು. ಬಿಜೆಪಿ ಕಾರ್ಯಕರ್ತರೇ ಶೆಟ್ಟರ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಅಂದರೆ ಅವರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿದೆ, ಅವರು ಮಾತ್ರವಲ್ಲ ಬೆಳಗಾವಿ ಕ್ಷೇತ್ರದ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ, ಬೆಳಗಾವಿ ತಮ್ಮ ಕರ್ಮಭೂಮಿ ಎಂದು ಹೇಳುವ ಅವರಿಗೆ ನಾಚಿಕೆಯಾಗಬೇಕು, ಬೆಳಗಾವಿ ಜಿಲ್ಲೆಗೆ ಅವರು ನೀಡಿರುವ ಕೊಡುಗೆದಾದರೂ ಏನು? ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗಲೂ ಅವರಿಂದ ಜಿಲ್ಲೆಗೆ ಪ್ರಯೋಜನವಾಗಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಳಗಾವಿಯಲ್ಲಿ ಜೋರಾಯ್ತು ಜಗದೀಶ್ ಶೆಟ್ಟರ್ ಸ್ಪರ್ಧೆಗೆ ವಿರೋಧ: ರಾಜ್ಯ ನಾಯಕರು, ಹೈಕಮಾಂಡ್ ಭೇಟಿಗೆ ಮುಂದಾದ ಸ್ಥಳೀಯರು

 

 

 

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.