Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಿನ್ನೆ ಅಶೋಕ ಹೇಳಿದ್ದನ್ನೇ ಇವತ್ತು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿದರು!

ಬೆಂಗಳೂರಲ್ಲಿ ನಿನ್ನೆ ಅಶೋಕ ಹೇಳಿದ್ದನ್ನೇ ಇವತ್ತು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿದರು!

ಅರುಣ್​ ಕುಮಾರ್​ ಬೆಳ್ಳಿ
|

Updated on: May 16, 2024 | 11:38 AM

ಸಿದ್ದರಾಮಯ್ಯ 5-ವರ್ಷ ಅವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆಯೇ ಅಥವಾ ಅರ್ಧ ಅವಧಿಯ ನಂತರ ನಿರ್ಗಮಿಸುತ್ತಾರೆಯೇ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ, ಸಿಎಂ ಕುರ್ಚಿಗಾಗಿ ಶಿವಕುಮಾರ್ ನಡೆಸುತ್ತಿರುವ ಕಸರತ್ತು ಸಹ ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿ: ನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಹಿರಿಯ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ (Jagadish Shettar) ರಾಜ್ಯ ಸರ್ಕಾರದ ಬಗ್ಗೆ ನಿನ್ನೆ ಬೆಂಗಳೂರಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಹೇಳಿದ್ದನ್ನೇ ಹೇಳಿದರು. ಸಿದ್ದರಾಮಯ್ಯ ಸರ್ಕಾರ (Siddaramaiah) ಉರುಳಲು ಆಪರೇಷನ್ ಕಮಲ ನಡೆಸುವ ಆವಶ್ಯಕತೆಯಿಲ್ಲ, ಅಸಮಾಧಾನದಿಂದ ಕುದಿಯುತ್ತಿರುವ ಕಾಂಗ್ರೆಸ್ ಶಾಸಕರೇ ಪತನಕ್ಕೆ ಕಾರಣರಾಗುತ್ತಾರೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆಯಾಗದ ಕಾರಣ ಅವರೆಲ್ಲ ಕೊತಕೊತ ಕುದಿಯುತ್ತಿದ್ದಾರೆ, ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಯಾವುದೇ ಕ್ಷಣದಲ್ಲಿ ಅವರ ಅಸಮಾಧಾನ ಸ್ಪೋಟಗೊಳ್ಳಬಹುದು, ಕಾಂಗ್ರೆಸ್ ಪಕ್ಷದಲ್ಲಿನ ವಿದ್ಯಮಾನಗಳನ್ನು 2-3 ತಿಂಗಳುಗಳಿಂದ ಗಮನಿಸಿ ಹೀಗೆ ಹೇಳುತ್ತಿರುವೆನೆಂದು ಶೆಟ್ಟರ್ ಹೇಳಿದರು. ಅದಲ್ಲದೆ, ಸಿಎಂ ಮತ್ತು ಡಿಸಿಎಂ ನಡುವೆ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟ ಗುದ್ದಾಟ ಸರ್ಕಾರ ರಚನೆಯಾಗುವ ಮೊದಲಿಂದ ನಡೆಯುತ್ತಿದೆ. ಸಿದ್ದರಾಮಯ್ಯ 5-ವರ್ಷ ಅವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆಯೇ ಅಥವಾ ಅರ್ಧ ಅವಧಿಯ ನಂತರ ನಿರ್ಗಮಿಸುತ್ತಾರೆಯೇ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ, ಸಿಎಂ ಕುರ್ಚಿಗಾಗಿ ಶಿವಕುಮಾರ್ ನಡೆಸುತ್ತಿರುವ ಕಸರತ್ತು ಸಹ ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬೆಳಗಾವಿಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್; ಪ್ರಚಾರಕ್ಕೆ ಹೋಗುತ್ತೇನೆ ಎಂದ ಮಂಗಳಾ ಅಂಗಡಿ