ಕಾರ್ಯಕಾರಿಣಿ ಸಮಿತಿ ಸಭೆಗೆ ಆಗಮಿಸಿದ ಜಗದೀಶ್ ಶೆಟ್ಟರ್​ಗೆ ಬಿಜೆಪಿ ನಾಯಕರಿಂದ ಆತ್ಮೀಯ ಸ್ವಾಗತ

ಕಾರ್ಯಕಾರಿಣಿ ಸಮಿತಿ ಸಭೆಗೆ ಆಗಮಿಸಿದ ಜಗದೀಶ್ ಶೆಟ್ಟರ್​ಗೆ ಬಿಜೆಪಿ ನಾಯಕರಿಂದ ಆತ್ಮೀಯ ಸ್ವಾಗತ

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 27, 2024 | 12:55 PM

ಈಗಾಗಲೇ ವರದಿ ಮಾಡಿರುವ ಹಾಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದ್ದು ಪಕ್ಷದ ಸುಮಾರು ಒಂದು ಸಾವಿರ ಸದಸ್ಯರು ಭಾಗಿಯಾಗಿದ್ದಾರೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದಾರೆ.

ಬೆಂಗಳೂರು: ಸುಭಾ ಕಾ ಭೂಲಾ ಅಗರ್ ಶಾಮ್ ಘರ್ ಲೌಟ್ ಆಯೇ ತೋ ಉಸೆ ಭೂಲ ನಹಿಂ ಕಹತೆ ಅಂತೊಂದು ಹಿಂದಿಯಲ್ಲಿ ಗಾದೆ ಮಾತಿದೆ. ಕಾಂಗ್ರೆಸ್ ಪಕ್ಷದಿಂದ ವಾಪಸ್ಸು ಬಿಜೆಪಿ ಹೋಗಿರುವ ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ಇಂದು ಅರಮನೆ ಮೈದಾನದಲ್ಲಿ ಪಕ್ಷದ ಹಿರಿಯ ರಾಜ್ಯ ನಾಯಕರು ಸ್ವಾಗತಿಸಿ ಅಭಿನಂದಿಸುತ್ತಿರವುದನ್ನು ನೋಡಿದಾಗ ಸಹಜವಾಗೇ ಗಾದೆಮಾತು ನೆನಪಿಗೆ ಬರುತ್ತದೆ. ನಾವು ಈಗಾಗಲೇ ವರದಿ ಮಾಡಿರುವ ಹಾಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ (palace grounds) ಬಿಜೆಪಿ ಕಾರ್ಯಕಾರಿಣಿ ಸಭೆ (BJP Executive Committee Meeting) ಆಯೋಜಿಸಲಾಗಿದ್ದು ಪಕ್ಷದ ಸುಮಾರು ಒಂದು ಸಾವಿರ ಸದಸ್ಯರು ಭಾಗಿಯಾಗಿದ್ದಾರೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದಾರೆ. ಸಭೆಗೆ ಆಗಮಿಸಿದ ಶೆಟ್ಟರ್, ವೇದಿಕೆ ಮೇಲಿದ್ದ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ನಾಯಕೆ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವ ಕೆಎಸ್ ಈಶ್ವರಪ್ಪ, ವಿರೋಧ ಪಕ್ಷದ ನಾಯಕ ಆರ್ ಅಶೋಕ, ಮಾಜಿ ಸಚಿವ ಸಿಟಿ ರವಿ, ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ ಮೊದಲಾದವರೊಂದಿಗೆ ಕೈಕುಲುಕುವುದನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ