Karnataka Assembly Polls Results: ಜಗದೀಶ್ ಶೆಟ್ಟರ್ ಸೋತರೂ ಧೃತಿಗೆಟ್ಟಿಲ್ಲ, ಅಭಿಮಾನಿಗಳೊಂದಿಗೆ ವಿಶ್ವಾಸದಿಂದ ಮಾತಾಡಿದರು!

Updated on: May 13, 2023 | 5:13 PM

ಕೆಲ ಅಭಿಮಾನಿಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರೂ ಶೆಟ್ಟರ್  ಅವರನ್ನು ಸಮಾಧಾನಪಡಿಸಿ ಕಳಿಸಿದರು.

ಹುಬ್ಬಳ್ಳಿ: ಚುನಾವಣೆ ತೀರ ಹತ್ತಿರದಲ್ಲಿದ್ದಾಗ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿ ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ (Jagadish Shettar) ಸೋತಿದ್ದಾರೆ. ಆದರೆ ಶೆಟ್ಟರ್ ಸೋಲನ್ನು ಸ್ಪೋರ್ಟ್ ಆಗಿ ಸ್ವೀಕರಿಸಿದ್ದಾರೆ. ನಿಮಗೆ ನೆನಪುರಬಹುದು, ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಶೆಟ್ಟರ್ ರನ್ನು ಸೋಲಿಸಲೇಬೇಕು ಎಂದು ಪಣತೊಟ್ಟು. ತಮ್ಮ ಗುರಿ ಸಾಧಿಸಿದ್ದಾರೆ. ಫಲಿತಾಂಶ ಪ್ರಕಟವಾದ ಬಳಿಕ ಭೇಟಿಯಾಗಲು ಬಂದ ಬೆಂಬಲಿಗರನ್ನು ಶೆಟ್ಟರ್ ವಿಶ್ವಾಸದಿಂದ ಮಾತಾಡಿಸಿದರು. ಕೆಲ ಅಭಿಮಾನಿಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರೂ ಶೆಟ್ಟರ್  ಅವರನ್ನು ಸಮಾಧಾನಪಡಿಸಿ ಕಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More