AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls; ಜಗದೀಶ್ ಶೆಟ್ಟರ್ ನಿರ್ಗಮನ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರದು: ಬಸನಗೌಡ ಪಾಟೀಲ್ ಯತ್ನಾಳ್

Karnataka Assembly Polls; ಜಗದೀಶ್ ಶೆಟ್ಟರ್ ನಿರ್ಗಮನ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರದು: ಬಸನಗೌಡ ಪಾಟೀಲ್ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 17, 2023 | 7:08 PM

Share

ಕರ್ನಾಟಕದಲ್ಲಿ ಎರಡನೇ ಸ್ತರದ ನಾಯಕತ್ವ ಜವಾಬ್ದಾರಿಯನ್ನು ಹೊರಲು ಸಿದ್ಧವಾಗಿರುವುದರಿಂದ ಹಳಬರರು ಹೋದರೆ ಪಕ್ಷಕ್ಕೇನೂ ನಷ್ಟವಿಲ್ಲ ಎಂದು ಯತ್ನಾಳ್ ಹೇಳಿದರು.

ವಿಜಯಪುರ: ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಪಕ್ಷ ಸೇರಿದ ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ವಿಜಯಪಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ತರಾಟೆಗೆ ತೆಗೆದುಕೊಂಡಿದ್ದಾರೆ. ಇಷ್ಟು ವರ್ಷಗಳ ಕಾಲ ಪಕ್ಷದ ಎಲ್ಲ ಸವಲತ್ತುಗಳನ್ನು ಅನುಭವಿಸಿ ಕೇವಲ ಟಿಕೆಟ್ ಸಿಗಲಿಲ್ಲ ಎನ್ನುವ ಕಾರಣಕ್ಕೆ ನಿಷ್ಠೆ ಬದಲಾಯಿಸುವು ಯಾವ ಪುರುಷಾರ್ಥ? ಯಾರೇ ಹೋದರೂ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ನಾಯಕತ್ವ ಬೇಕಾಗಿದೆ ಮತ್ತು ರಾಜ್ಯಕ್ಕೆ ಬಿಜೆಪಿ ಸರ್ಕಾರದ ಅವಶ್ಯಕತೆಯಿದೆ. ಕರ್ನಾಟಕದಲ್ಲಿ ಎರಡನೇ ಸ್ತರದ ನಾಯಕತ್ವ ಜವಾಬ್ದಾರಿಯನ್ನು ಹೊರಲು ಸಿದ್ಧವಾಗಿರುವುದರಿಂದ ಹಳಬರರು ಹೋದರೆ ಪಕ್ಷಕ್ಕೇನೂ ನಷ್ಟವಿಲ್ಲ ಎಂದು ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ