ಸ್ಪೀಕರ್ ಕಾಗೇರಿಗೆ ರಾಜೀನಾಮೆ ನೀಡಲು ಶಿರಸಿಗೆ ತೆರಳುತ್ತಿದ್ದೇನೆ -ಜಗದೀಶ ಶೆಟ್ಟರ್
ಹುಬ್ಬಳ್ಳಿ– ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈತಪ್ಪಿದಕ್ಕೆ ಜಗದೀಶ ಶೆಟ್ಟರ್ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು ಸ್ಪೀಕರ್ ಕಾಗೇರಿ ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಹುಬ್ಬಳ್ಳಿ– ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈತಪ್ಪಿದಕ್ಕೆ ಜಗದೀಶ ಶೆಟ್ಟರ್ ಬಿಜೆಪಿಗೆ ಗುಡ್ ಬೈ ಹೇಳೀದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಸ್ಪೀಕರ್ ಕಾಗೇರಿ ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಸ್ಪೀಕರ್ ಕಾಗೇರಿಗೆ ರಾಜೀನಾಮೆ ನೀಡಲು ಶಿರಸಿಗೆ ತೆರಳುತ್ತೇನೆ ಎಂದರು. ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸೇರಿ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ನೀಡುವೆ. ಈ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದು ನಿಶ್ಚಿತ. ಸ್ಪೀಕರ್ಗೆ ರಾಜೀನಾಮೆ ನೀಡಿದ ಬಳಿಕ ಹುಬ್ಬಳ್ಳಿಗೆ ವಾಪಸಾಗುತ್ತೇನೆ. ಈವರೆಗೆ ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ಬೆಂಬಲಿಗರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಮಾಡ್ತೇನೆ ಎಂದರು.
Published on: Apr 16, 2023 09:29 AM
Latest Videos