ನನ್ನ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ!ವಿರೋಧಿಗಳಿಗೆ ಜಗದೀಶ್ ಶೆಟ್ಟರ್ ವಾರ್ನ್

Edited By: ಕಿರಣ್ ಹನುಮಂತ್​ ಮಾದಾರ್

Updated on: Dec 17, 2023 | 9:58 PM

‘ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲವೆಂದು ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್(Jagadish Shettar) ಎಚ್ಚರಿಕೆ ಕೊಟ್ಟಿದ್ದಾರೆ. 68ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಕಳೆದ ವರ್ಷವೂ ಇದೇ ಮಾತು ಹೇಳಿದ್ದೆ, ತಂಟೆಗೆ ಬಂದವರಿಗೆ ಉತ್ತರಿಸಿದ್ದೇನೆ ಎಂದರು.

ಹುಬ್ಬಳ್ಳಿ, ಡಿ.17: ‘ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲವೆಂದು ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್(Jagadish Shettar) ಎಚ್ಚರಿಕೆ ಕೊಟ್ಟಿದ್ದಾರೆ. 68ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಕಳೆದ ವರ್ಷವೂ ಇದೇ ಮಾತು ಹೇಳಿದ್ದೆ, ತಂಟೆಗೆ ಬಂದವರಿಗೆ ಉತ್ತರಿಸಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, 6 ಬಾರಿ ನನ್ನನ್ನು ಜನ ಗೆಲ್ಲಿಸಿರುವುದನ್ನು ಮರೆಯುವುದಿಲ್ಲ. ನಾನು ಸೋತರೂ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದ್ದೇವೆ. ನನ್ನ ಉಸಾಬರಿಗೆ ಬಂದವರಿಗೆ ತಕ್ಕ ಉತ್ತರ ಕೊಟ್ಟಿದ್ದೇನೆ. ಇನ್ಮುಂದೆಯೂ ನನ್ನ ಉಸಾಬರಿಗೆ ಬಂದವರನ್ನು ಸುಮ್ಮನೆ ಬಿಡಲ್ಲ ಎಂದು ಹುಬ್ಬಳ್ಳಿಯ ಸವಾಯಿಗಂಧರ್ವ ಹಾಲ್​ನಲ್ಲಿ ಜಗದೀಶ್ ಶೆಟ್ಟರ್ ಎಚ್ಚರಿಕೆ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More